HomeKarnatakaರಾಜ್ಯದಲ್ಲಿ 'ಡೆಂಗ್ಯೂ' ಭೀತಿ ; 'BPL' ಕುಟುಂಬಗಳಿಗೆ ಸರ್ಕಾರದಿಂದ ಸೊಳ್ಳೆ ಪರದೆ ವಿತರಣೆ.!

ರಾಜ್ಯದಲ್ಲಿ ‘ಡೆಂಗ್ಯೂ’ ಭೀತಿ ; ‘BPL’ ಕುಟುಂಬಗಳಿಗೆ ಸರ್ಕಾರದಿಂದ ಸೊಳ್ಳೆ ಪರದೆ ವಿತರಣೆ.!

ಬೆಂಗಳೂರು : ರಾಜ್ಯದಲ್ಲಿ ಡೆಂಘಿ ಜ್ವರ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆಗೆ ವಾರ್ ರೂಮ್ ಪ್ರಾರಂಭಿಸಿ, ಡೆಂಘಿ ಪೀಡಿತರ ಮೇಲೆ 14 ದಿನಗಳು ನಿಗಾ ವಹಿಸಬೇಕೆಂದು ಆರೋಗ್ಯ ಇಲಾಖೆಯು ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.

ಆರೋಗ್ಯ ಸೌಧದಲ್ಲಿರುವ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ ವಿಭಾಗವು ರಾಜ್ಯಮಟ್ಟದ ವಾರ್ ರೂಮ್ ಉಸ್ತುವಾರಿ ಹೊಂದಿರಲಿದೆ.

ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳು ಅಧಿಕ ಪ್ರಕರಣಗಳು ವರದಿಯಾದ ಪ್ರದೇಶ ಗುರುತಿಸಿ, ವಿವರವನ್ನು ರಾಜ್ಯಮಟ್ಟದ ವಾರ್ ರೂಮ್ಗೆ ಸಲ್ಲಿಸಬೇಕು. ಹೆಚ್ಚು ಪ್ರಕರಣಗಳು ವರದಿಯಾದ ಪ್ರದೇಶಗಳಲ್ಲಿ ಲಾರ್ವಾ ನಾಶ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು. ಜ್ವರ ಕ್ಲಿನಿಕ್ಗಳನ್ನು ತುರ್ತಾಗಿ ಪ್ರಾರಂಭಿಸಬೇಕು. ಬಿಪಿಎಲ್ ಕುಟುಂಬಗಳಿಗೆ ಸೊಳ್ಳೆ ಪರದೆ ವಿತರಣೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಸುತ್ತೋಲೆ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular