ಡೆಂಗ್ಯೂ ತಡೆಗೆ ಮಹತ್ವದ ಕ್ರಮ: ಗ್ರಾಪಂ ಕಾರ್ಯಪಡೆ ಸದಸ್ಯರಿಗೆ ಯೂಟ್ಯೂಬ್ ಆಧಾರಿತ ತರಬೇತಿ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಗ್ರಾಮ ಪಂಚಾಯಿತಿ ಕಾರ್ಯಪಡೆ(GPTF) ಸದಸ್ಯರಿಗೆ You Tube ಆಧಾರಿತ ತರಬೇತಿಯನ್ನು ಆಯೋಜಿಸಲಾಗಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ಪ್ರಕರಣಗಳು ಹರಡುವುದನ್ನು ತಡೆಗಟ್ಟಲು ಗ್ರಾಮ ಪಂಚಾಯಿತಿಗಳು ಸೂಕ್ತ ಮುನ್ನಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಕಾರ್ಯಪಡೆಯ(GPTF) ಎಲ್ಲಾ ಸದಸ್ಯರಿಗೆ ಜು. 16ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ You Tube ತರಬೇತಿಯನ್ನು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ನಿರ್ದೇಶನದ ಮೇರೆಗೆ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ (ANSSIRD&PR) ಮೈಸೂರು ವತಿಯಿಂದ ಆಯೋಜಿಸಲಾಗಿದೆ.

You Tube ಲಿಂಕ್(https://www.youtube.com/live/fM4gaRpOKKE?si=sbQWLHueRUbSBk6S) ಬಳಸಿಕೊಂಡು ತರಬೇತಿಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳ, ಗ್ರಾಮ ಪಂಚಾಯಿತಿ ಕಾರ್ಯಪಡೆಯ(GPTF) ಎಲ್ಲಾ ಸದಸ್ಯರು- ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮುಖ್ಯೋಪಾಧ್ಯಾಯರು ಹೀಗೆ ಎಲ್ಲಾ ಸದಸ್ಯರು ತಪ್ಪದೇ ಹಾಜರಾಗುವಂತೆ ಕೋರಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read