ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ. ಚಳಿಯ ತೀವ್ರತೆ ಹೆಚ್ಚಾಗಿರುತ್ತದೆ. ಹಗಲು ವೇಳೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ ಒಳನಾಡು ಭಾಗದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತಷ್ಟು ಇಳಿಕೆಯಾಗಲಿದೆ. ಬೀದರ್ ನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇದೆ. ಕನಿಷ್ಠ ತಾಪಮಾನ 13.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ.
