HomeLatest Newsರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ, ತೀವ್ರ ಚಳಿ ಮುನ್ಸೂಚನೆ

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ, ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ. ಚಳಿಯ ತೀವ್ರತೆ ಹೆಚ್ಚಾಗಿರುತ್ತದೆ. ಹಗಲು ವೇಳೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ ಒಳನಾಡು ಭಾಗದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತಷ್ಟು ಇಳಿಕೆಯಾಗಲಿದೆ. ಬೀದರ್ ನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇದೆ. ಕನಿಷ್ಠ ತಾಪಮಾನ 13.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular