HomeLatest Newsದಂತ ವೈದ್ಯಕೀಯ, ಪಶು ವೈದ್ಯಕೀಯ ಕೋರ್ಸ್ ಪ್ರವೇಶ: ಸೀಟು ಹಂಚಿಕೆ ಬಗ್ಗೆ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ದಂತ ವೈದ್ಯಕೀಯ, ಪಶು ವೈದ್ಯಕೀಯ ಕೋರ್ಸ್ ಪ್ರವೇಶ: ಸೀಟು ಹಂಚಿಕೆ ಬಗ್ಗೆ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದ ವಿವಿಧ ಕಾಲೇಜುಗಳಲ್ಲಿ ಇನ್ನೂ ‌24 ಪಶು ವೈದ್ಯಕೀಯ ಸೀಟುಗಳು ಹಂಚಿಕೆಗೆ ಲಭ್ಯ ಇದ್ದು, ಅವುಗಳ ಭರ್ತಿಗೆ ಜನವರಿ 6ರಂದು ಅಂತಿಮ ಸುತ್ತಿನ ಸೀಟು ಹಂಚಿಕೆ ಮಾಡಲಾಗುವುದು.

ಇದುವರೆಗೂ ಯಾವುದೇ ಸುತ್ತಿನಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪಶು ವೈದ್ಯಕೀಯ ಸೀಟು ಹಂಚಿಕೆಯಾಗದಿರುವ ಅಭ್ಯರ್ಥಿಗಳು ಈ ಸುತ್ತಿನಲ್ಲಿ ಭಾಗವಹಿಸಬಹುದು.

ಆಸಕ್ತ ಅಭ್ಯರ್ಥಿಗಳು ಕೋರ್ಸ್ ಶುಲ್ಕದ ಡಿ.ಡಿ ಜತೆಗೆ ಮೂಲ ದಾಖಲೆಗಳೊಂದಿಗೆ ಜ.6ರಂದು ಬೆಳಿಗ್ಗೆ 10ರಿಂದ‌ 11ಗಂಟೆವರೆಗೆ ಕೆಇಎ ಕಚೇರಿಯಲ್ಲಿ ಖುದ್ದು ಸಲ್ಲಿಸಬೇಕು. ಬಳಿಕ ಮಧ್ಯಾಹ್ನ‌ 12ರಿಂದ‌ 1ಗಂಟೆವರೆಗೆ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುತ್ತದೆ. ಅದೇ ದಿನ ಮಧ್ಯಾಹ್ನ 2ಗಂಟೆಗೆ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಎಸ್ ಸಿ ಕೃಷಿ, ರೇಷ್ಮೆ ಕೃಷಿ ಇತ್ಯಾದಿ ಫಾರ್ಮ್‌ ಸೈನ್ಸ್ ಕೋರ್ಸ್ ಗಳಿಗೆ‌ ಸೀಟು ಹಂಚಿಕೆ ಮಾಡಿಕೊಂಡು ನಂತರ ರದ್ದುಪಡಿಸಿಕೊಂಡವರು ಈ ಸುತ್ತಿಗೆ ಅರ್ಹರಾಗುವುದಿಲ್ಲ. ಇತರೆ ಅಭ್ಯರ್ಥಿಗಳು, ಲಭ್ಯ ಪಶು ವೈದ್ಯಕೀಯ ಸೀಟುಗಳಲ್ಲಿ ಆಸಕ್ತಿ ಇದ್ದಲ್ಲಿ ಪ್ರಸಕ್ತ ಕಾಲೇಜಿನಿಂದ ಕಡ್ಡಾಯವಾಗಿ ಎನ್ ಓ ಸಿ ಪಡೆದು, ಪೋಷಕರೊಡನೆ ಚರ್ಚಿಸಿ, ಸೀಟು ಹಂಚಿಕೆಯಲ್ಲಿ ಭಾಗವಹಿಸಬಹುದು.

ಪ್ರಾಧಿಕಾರವು ಈಗಾಗಲೇ ಆಯಾ ಕಾಲೇಜುಗಳಿಗೆ ಶುಲ್ಕ ವರ್ಗಾವಣೆ ಮಾಡಿರುವುದರಿಂದ ಈ ಹಿಂದೆ ಹಂಚಿಕೆಯಾಗಿದ್ದ ಸೀಟಿಗೆ ಪಾವತಿಸಿರುವ ಶುಲ್ಕವನ್ನು ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ.

ದಂತ ವೈದ್ಯಕೀಯ

ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ವಿಶೇಷ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗಿದೆ.

ಬಾಕಿ ಉಳಿದಿದ್ದ ಆರು ಸೀಟುಗಳನ್ನು ಇಂದು ಹಂಚಿಕೆ ಮಾಡಲಾಗಿದೆ. ಈ ಸೀಟು ಹಂಚಿಕೆಯಲ್ಲಿ ಒಟ್ಟು‌ 64 ಮಂದಿ ಭಾಗವಹಿಸಿದ್ದರು. ಸೀಟಿ ಹಂಚಿಕೆಯಾದವರು ಜನವರಿ 1ರಂದು ಸಂಬಂಧಪಟ್ಟ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular