ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ (ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿ ಮತ್ತು ನರ್ಸಿಂಗ್ ಕೋರ್ಸ್) ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ‘ಶುಲ್ಕ ಮರುಪಾವತಿ’ ಕಾರ್ಯಕ್ರಮದಡಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ವಿದ್ಯಾಸಂಸ್ಥೆಗಳು ಮನವಿ ಮಾಡಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಮಾ.10 ರ ವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಭಾನುಮತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.