HomeKarnatakaಗುಡ್ ನ್ಯೂಸ್: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಗುಡ್ ನ್ಯೂಸ್: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಬೋಧನಾ ಕಾರ್ಯಕ್ಕೆ ಅಗತ್ಯವಿರುವ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಮೂಲಕ ಕೌನ್ಸೆಲಿಂಗ್ ನಡೆಸಿ ಭರ್ತಿ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆಯಿಂದ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.

ಜನವರಿ- ಫೆಬ್ರವರಿಯಲ್ಲಿ 2, 4 ಮತ್ತು 6ನೇ ಸೆಮಿಸ್ಟರ್ ತರಗತಿಗಳು ಆರಂಭವಾಗಲಿದ್ದು, ಶೈಕ್ಷಣಿಕ ಹಿತದೃಷ್ಟಿಯಿಂದ ಕಾಯಂ ಪ್ರಾಧ್ಯಾಪಕರಿಗೆ ಹಂಚಿಕೆಯಾಗಿ ಉಳಿಕೆಯಾಗುವ ಕಾರ್ಯಭಾರಕ್ಕೆ ಅನುಕೂಲವಾಗಿ ನೇಮಕ ಮಾಡಿಕೊಳ್ಳಬೇಕು.

ಕೌನ್ಸೆಲಿಂಗ್ ನಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಜನವರಿ 3ರಿಂದ 8ರವರೆಗೆ ಅರ್ಜಿ ಸಲ್ಲಿಸಬಹುದು. ಜನವರಿ 9ರಂದು ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗುವುದು. ನಂತರ ತಿದ್ದುಪಡಿಗೆ ಜನವರಿ 10 ಮತ್ತು 11ರ ವರೆಗೆ ಅವಕಾಶವಿರುತ್ತದೆ. ಜನವರಿ 13ರಂದು ಪಟ್ಟಿಯ ಅನ್ವಯ ಕಾಲೇಜು ಆಯ್ಕೆಯ ಕೌನ್ಸಿಲಿಂಗ್ ನಡೆಸಲಿದ್ದು, ಜನವರಿ 30ರಂದು ಕೌನ್ಸೆಲಿಂಗ್ ನಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular