ಗಮನಿಸಿ : ಕೆಲವೇ ಕ್ಷಣಗಳಲ್ಲಿ ಯಜಮಾನಿಯರ ಖಾತೆಗೆ `ಗೃಹಲಕ್ಷ್ಮಿ’ ಹಣ ಜಮಾ : ಲೀಸ್ಟ್ ನಲ್ಲಿ ನಿಮ್ಮ ಹೆಸರು ಇದೆಯೋ? ಇಲ್ವೋ ಎಂದು ಹೀಗೆ ಚೆಕ್ ಮಾಡಿ!

ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ಇಂದು ಮೈಸೂರಿನಲ್ಲಿ ಅಧಿಕೃತ ಚಾಲನೆ ಸಿಗಲಿದೆ.

ಗೃಹಲಕ್ಷ್ಮೀ ಯೋಜನೆ ಹಣ ಯಾವ ಯಾವ ಮಹಿಳೆಯರಿಗೆ ಜಮಾ ಆಗುತ್ತದೆ ಎಂಬುದನ್ನು ನೀವು ಈ ರೀತಿಯಾಗಿ ಚೆಕ್ ಮಾಡಬಹುದು.

ಮೊದಲು https://ahara.kar.nic.in/Home/EServices ವೆಬ್ ಸೈಟ್ ಭೇಟಿ ಕೊಡಿ. ನಂತರ ಇ ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ್ ಹಾಗೂ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಿ..ಬಳಿಕ ಇನ್ನೊಂದು ಪೇಜ್ ಓಪನ್ ಆಗುತ್ತದೆ..ಅಲ್ಲಿ ನಿಮ್ಮ ಆರ್ ಸಿ ನಂಬರ್, ವಿಳಾಸ, ರೇಷನ್ ಕಾರ್ಡ್ ಬಗ್ಗೆ ಮಾಹಿತಿ ಬರುತ್ತದೆ. ಆರ್ ಸಿ ನಂಬರ್ ಬಳಿಕ ಮಹಿಳೆಯರ ಹೆಸರಿದ್ದರೆ ಮಾತ್ರ ಅವರನ್ನು ಕುಟುಂಬದ ಮುಖ್ಯಸ್ಥರೆಂದು ಪರಿಗಣಿಸಲಾಗುತ್ತದೆ. ಇಲ್ಲಿ ಮಹಿಳೆಯರ ಹೆಸರಿದ್ದವರು ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಸಿದ್ದರೆ 2 ಸಾವಿರ ಜಮಾ ಮಾಡಲಾಗುತ್ತದೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೆಳಗ್ಗೆ 11.30 ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಉಪಸ್ಥಿತರಿರಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಸಚಿವರು ಪಾಲ್ಗೊಳ್ಳಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read