HomeIndiaGOOD NEWS: ಅಂಚೆ ಕಚೇರಿಗಳಲ್ಲಿ ಹೆಚ್ಚುವರಿಯಾಗಿ 600 ಪಾಸ್ಪೋರ್ಟ್ ಸೇವಾ ಕೇಂದ್ರ ಸ್ಥಾಪನೆ

GOOD NEWS: ಅಂಚೆ ಕಚೇರಿಗಳಲ್ಲಿ ಹೆಚ್ಚುವರಿಯಾಗಿ 600 ಪಾಸ್ಪೋರ್ಟ್ ಸೇವಾ ಕೇಂದ್ರ ಸ್ಥಾಪನೆ

ನವದೆಹಲಿ: ದೇಶದ ಅಂಚೆ ಕಚೇರಿಗಳಲ್ಲಿ ಹೆಚ್ಚುವರಿಯಾಗಿ 600 ಪಾಸ್ಪೋರ್ಟ್ ಸೇವಾ ಕೇಂದ್ರ ತೆರೆಯುವುದಾಗಿ ಕೇಂದ್ರ ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ.

ಶುಕ್ರವಾರ ದೆಹಲಿಯಲ್ಲಿ ನಡೆದ ಭಾರತೀಯ ಆರ್ಥಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಅಂಚೆ ಇಲಾಖೆ ದೇಶಾದ್ಯಂತ 6.40 ಲಕ್ಷ ಕಚೇರಿಗಳನ್ನು ಹೊಂದಿದೆ. ವಿಶ್ವದ ಯಾವುದೇ ದೇಶವು ಇಷ್ಟು ಸಂಖ್ಯೆಯ ಅಂಚೆ ಕಚೇರಿಗಳನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಜನರಿಗೆ ಪಾಸ್ಪೋರ್ಟ್ ಸೇವೆ ಒದಗಿಸಲು ಅಂಚೆ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಈ ಹೆಚ್ಚುವರಿ 600 ಸೇವಾ ಕೇಂದ್ರಗಳನ್ನು 2028 -29 ರೊಳಗೆ ತೆರೆಯಲಾಗುವುದು. ಇವುಗಳ ಮೂಲಕ ವಾರ್ಷಿಕ ಒಂದು ಕೋಟಿ ಜನರಿಗೆ ಸೇವೆ ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2017ರಲ್ಲಿ ಅಂಚೆ ಕಚೇರಿಗಳಲ್ಲಿ ಪಾಸ್ಪೋರ್ಟ್ ಸೇವಾ ಕೇಂದ್ರ ತೆರೆಯಲಾಗಿದೆ. ಹಾಲಿ ಇರುವ 442 ಕೇಂದ್ರಗಳ ಮೂಲಕ ಇದುವರೆಗೆ 1.52 ಕೋಟಿ ಹೆಚ್ಚು ಜನರಿಗೆ ಪಾಸ್ಪೋರ್ಟ್ ಸಂಬಂಧಿತ ಸೇವೆಗಳನ್ನು ಒದಗಿಸಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular