HomeKarnatakaಹಿಂದೂ ದೇವರ ಬಗ್ಗೆ ಅವಹೇಳನಕಾರಿ ಪೋಸ್ಟ್: ವ್ಯಕ್ತಿಯ ವಿರುದ್ಧ ದೂರು ದಾಖಲು

ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಪೋಸ್ಟ್: ವ್ಯಕ್ತಿಯ ವಿರುದ್ಧ ದೂರು ದಾಖಲು

ಬೆಂಗಳೂರು: ಹಿಂದೂ ದೇವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಮೆಂಟ್ ಹಾಕಿದ್ದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.

ಅಂಜುಮನ್ ಶೇಖ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಾಂಬೆ, ಮೂಕಾಂಬಿಕಾ ದೇವಿ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ದ. ಈ ತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ದೂರು ನೀಡಿದೆ.

ಈ ಬಗ್ಗೆ ಮಾತನಾಡಿರುವ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ರಾಘವೇಂದ್ರ ಭಟ್, ಅಂಜುಮನ್ ಶೇಖ್ ಎಂಬಾತ ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಾಂಬೆ, ಕೊಲ್ಲೂರು ಮುಕಾಂಬಿಕೆ, ತಿರುಪತಿ ತಿಮ್ಮಪ್ಪ, ಹಾಗೂ ಗಣೇಶ ದೇವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿದ್ದಾನೆ. ಇದರಿಂದ ನಮಗೆ ನೋವುಂಟಾಗಿದೆ. ಇಂತವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular