HomeKarnatakaಜಾಲತಾಣದಲ್ಲಿ ಸಿ.ಟಿ. ರವಿ ವಿರುದ್ಧ ಅವಹೇಳನಕಾರಿ, ಪ್ರಚೋದನಕಾರಿ ಪೋಸ್ಟ್: ದೂರು ದಾಖಲು

ಜಾಲತಾಣದಲ್ಲಿ ಸಿ.ಟಿ. ರವಿ ವಿರುದ್ಧ ಅವಹೇಳನಕಾರಿ, ಪ್ರಚೋದನಕಾರಿ ಪೋಸ್ಟ್: ದೂರು ದಾಖಲು

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಸಿಇಎನ್ ಅಪರಾಧ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂ ಖಾತೆಯೊಂದರಲ್ಲಿ ಸಿ.ಟಿ. ರವಿ ಅವರ ಬಗ್ಗೆ ನೀಟ್ ಹೋರಾಟಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಗಳನ್ನು ಅಪರಿಚಿತ ವ್ಯಕ್ತಿ ಪ್ರಕಟಿಸಿದ್ದಾನೆ ಎಂದು ದೂರು ನೀಡಲಾಗಿದೆ. ಈ ಪೋಸ್ಟ್ ಗಳು ಸಾರ್ವಜನಿಕರ ಭಾವನೆಗೆ ಧಕ್ಕೆ ಉಂಟು ಮಾಡುವ ಮತ್ತು ಸಾಮಾಜಿಕ ಅಶಾಂತಿಗೆ ಕಾರಣವಾಗುವ ಸಾಧ್ಯತೆಯಿದ್ದು, ಇಂತಹ ಪೋಸ್ಟ್ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular