ಬೆಂಗಳೂರು : ಬಿಜೆಪಿ ಎಂಎಲ್ ಸಿ ಸಿ.ಟಿ ರವಿ ವಿರುದ್ಧ ಎಫ್ ಐ ಆರ್ (FIR) ದಾಖಲಾಗಿದೆ. ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಎಫ್ ಐ ಆರ್ (FIR) ದಾಖಲಾಗಿದೆ.
ಅ.27ರಂದು ಚಿಕ್ಕಮಗಳೂರಲ್ಲಿಸವಿತ ಸಮಾಜದ ನಿಷೇಧಿತ ಪದ(ಹಜಾಮ)ವನ್ನು ಬಳಸಿದ್ದಾರೆ. ಈ ರೀತಿ ಅಸಂವಿಧಾನಿಕ ಪದ ಬಳಸಿ ನಮ್ಮ ಜಾತಿಯ ವೃತ್ತಿ ಧರ್ಮಕ್ಕೆ ಅವಮಾನ ಮಾಡಿ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ. ಆದ್ದರಿಂದ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಹಾಗೂ ಕಾನೂನಿನಡಿ ಅವರಿಗೆ ಶಿಕ್ಷೆ ಆಗಬೇಕು ಎಂದು ಸವಿತಾ ಸಮಾಜದ ಮುಖಂಡರು ಆಗ್ರಹಿಸಿದ್ದರು.
