HomeKarnatakaBREAKING : 'ಹಿಂದೂ' ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ; ಸಚಿವ 'ಸತೀಶ್ ಜಾರಕಿಹೊಳಿ'ಗೆ ಕೋರ್ಟ್...

BREAKING : ‘ಹಿಂದೂ’ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ; ಸಚಿವ ‘ಸತೀಶ್ ಜಾರಕಿಹೊಳಿ’ಗೆ ಕೋರ್ಟ್ ಸಮನ್ಸ್..!

ಬೆಂಗಳೂರು : ಹಿಂದೂ ಧರ್ಮದ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ ಸಚಿವ ಸತೀಶ್ ಜಾರಕಿಹೊಳಿಗೆ ಕೋರ್ಟ್ ಸಮನ್ಸ್ ನೀಡಿದೆ.

ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಮನ್ಸ್ ನೀಡಿದ್ದು, ಆ.27 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. 2022 ರಲ್ಲಿ ವಕೀಲ ದಿಲೀಪ್ ದೂರು ದಾಖಲಿಸಿದ್ದರು.

ನಿಪ್ಪಾಣಿಯಲ್ಲಿ ಆಯೋಜಿಸಲಾಗಿದ್ದ ಬುದ್ಧ ಅಂಬೇಡ್ಕರ್ ಸಮಾವೇಶದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಭಾಗಿಯಾಗಿದ್ದರು. ಈ ವೇಳೆ ಅವರು ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.ಹಿಂದೂ ಎಂಬ ಪದ ಮೂಲತಃ ಭಾರತದ್ದಲ್ಲ, ಅದು ಪರ್ಷಿಯಾದಿಂದ ಬಂದ ಪದ . ಅಸಲಿಗೆ ಹಿಂದೂ ಎಂಬ ಪದಕ್ಕೆ ಪರ್ಷಿಯಾ ಭಾಷೆಯಲ್ಲಿ ಅಶ್ಲೀಲವಾದ ಅರ್ಥಗಳಿವೆ ಎಂದಿದ್ದರು. ಬೇಕಾದರೆ ಯಾರಾದರೂ ಗೂಗಲ್ ನಲ್ಲಿ ಸರ್ಚ್ ಮಾಡಿ ನೋಡಬಹುದು ಅಂತ ಅವರು ಹೇಳಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸತೀಶ್ ಜಾರಕಿಹೊಳಿ ಹೇಳಿಕೆಗೆ ಬಿಜೆಪಿ ನಾಯಕರು ಹಾಗೂ ಹಿಂದೂ ಕಾರ್ಯಕರ್ತರು, ರಾಜ್ಯದ ಹಲವು ಕಡೆ ಸತೀಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದರು. ವಕೀಲ ದಿಲೀಪ್ ಕುಮಾರ್ ಅವರು ಕೋರ್ಟ್ ಮೊರೆ ಹೋಗಿದ್ದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular