ಬೆಂಗಳೂರು: ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಮಹಾಭಾರತದ ಪಾತ್ರಗಳು ಹಾಗೂ ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಪದ ಬಳಕೆಯಾದ ಬಗ್ಗೆ ಖಾಸಗಿ ಚಾನಲ್ ವೊಂದರ ತಂಡವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ,
ತಂಡದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ವಾಕ್ ಸ್ವಾತಂತ್ರ್ಯದ ನೆಪದಲ್ಲಿ ಅನಿಸಿದ್ದೆಲ್ಲವನ್ನು ಮಾಡಬಹುದೇ? ದೇವರು, ಪೌರಾಣಿಕ ವ್ಯಕ್ತಿಗಳನ್ನು ನಿಷ್ಪ್ರಯೋಜಕರು ಎನ್ನುವ ರೀತಿ ಬಿಂಬಿಸಬಹುದೇ ಎಂದು ಕಟುವಾಗಿ ಪ್ರಶ್ನಿಸಿದೆ.
ಹಿಂದೂ ದೇವತೆಗಳನ್ನು ಅವಹೇಳನ ಮಾಡಿ ಚಿತ್ರಿಸಲಾಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಖಾಸಗಿ ಚಾನೆಲ್ ವೊಂದರ ಪ್ರತಿನಿಧಿ ದೀಪಕ್ ಶ್ರೀರಾಮುಲು ಮತ್ತು ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ನಿರ್ದೇಶಕ ಕೆ. ಅನಿಲ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ವೇಳೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

