HomeKarnatakaಮುಖ್ಯಮಂತ್ರಿ ಹುದ್ದೆಯನ್ನೇ ನನಗೆ ಮೀಸಲಿಟ್ಟಿರಬಹುದು, ಅದ್ಕೆ ಮಂತ್ರಿ ಸ್ಥಾನ ಕೊಟ್ಟಿಲ್ಲ ಎಂದ ಶಾಸಕ ಆರ್.ವಿ.ದೇಶಪಾಂಡೆ

ಮುಖ್ಯಮಂತ್ರಿ ಹುದ್ದೆಯನ್ನೇ ನನಗೆ ಮೀಸಲಿಟ್ಟಿರಬಹುದು, ಅದ್ಕೆ ಮಂತ್ರಿ ಸ್ಥಾನ ಕೊಟ್ಟಿಲ್ಲ ಎಂದ ಶಾಸಕ ಆರ್.ವಿ.ದೇಶಪಾಂಡೆ

ಕಾರವಾರ: ಹಿರಿಯ ಶಾಸಕರಾದರೂ ಸಚಿವ ಸ್ಥಾನ ಸಿಗದಿರಲು ಕಾರಣವೇನು ಎಂಬ ಪ್ರಶ್ನೆಗೆ ಶಾಸಕ ಆರ್.ವಿ.ದೇಶಪಾಂಡೆ, ಮುಖ್ಯಮಂತ್ರಿ ಹುದ್ದೆಯನ್ನೇ ಮೀಸಲಿಟ್ಟಿರಬೇಕು ಅದ್ಕೆ ಸಚಿವ ಸ್ಥಾನ ಕೊಟ್ಟಿಲ್ಲ ಎಂದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ವಿ.ದೇಶಪಾಂಡೆ, ಸಿಎಂ ಸ್ಥಾನವನ್ನೇ ನನಗೆ ಮೀಸಲಿಟ್ಟಿರಬಹುದು. ಹಾಗಾಗಿ ಮಂತ್ರಿ ಸ್ಥಾನ ಕೊಟ್ಟಿಲ್ಲ ಎಂದು ಹಾಸ್ಯ ಚಟಾಕಿ ಬೀರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ಯಾರಂಟಿ ಯೋಜನೆಗಳ ಮೂಲಕವೇ ಬಿಜೆಪಿ ನಾಯಕರಿಗೆ ನಾವು ಉತ್ತರ ಕೊಟ್ಟಿದ್ದೇವೆ. ವಿಪಕ್ಷದವರು ಸರ್ಕಾರದ ಯೋಜನೆಯನ್ನೂ ಮೆಚ್ಚಬೇಕು ಅನಗತ್ಯವಾಗಿ ಟೀಕೆ ಮಾಡುವುದಲ್ಲ ಎಂದರು.

ಇದೇ ವೇಳೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅವೈಜ್ಞಾನಿಕ ಕಾಮಗಾರಿ ವಿಚಾರವಾಗಿ, ಕಾಮಗಾರಿ ಪೂರ್ಣಗೊಳ್ಳದೇ ಟೋಲ್ ಸಂಗ್ರಹ ಮಾಡುತ್ತಿರುವುದು ಸರಿಯಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular