ಬರದ ನಡುವೆಯೂ ರಾಜ್ಯದ ಜನ ಮೂರೊತ್ತಿನ ಊಟ ಮಾಡ್ತಿರೋದಕ್ಕೆ ನಮ್ಮ ಸರ್ಕಾರದ ಯೋಜನೆಗಳೇ ಕಾರಣ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಬರದ ನಡುವೆಯೂ ರಾಜ್ಯದ ಜನ ಮೂರೊತ್ತಿನ ಊಟ ಮಾಡ್ತಿದ್ದಾರೆ ಅಂದ್ರೆ ಅದಕ್ಕೆ ನಮ್ಮ ಸರ್ಕಾರದ ಯೋಜನೆಗಳೇ ಕಾರಣ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ವಿಪಕ್ಷ ನಾಯಕ ಅಶೋಕ್, ರಾಜ್ಯ ಸರ್ಕಾರ ಜನರಿಗೆ ಗುಳೆ ಗ್ಯಾರಂಟಿ ಕೊಟ್ಟಿದೆ ಎಂದು ಹೇಳಿರುವುದಕ್ಕೆ ನಾಚಿಕೆಪಡಬೇಕು. ಇಂತಹ ಭೀಕರ ಬರದ ನಡುವೆಯೂ ರಾಜ್ಯದ ಜನ ಮೂರೊತ್ತಿನ ಊಟ ಮಾಡುತ್ತಿದ್ದಾರೆ ಎಂದರೆ ಅದಕ್ಕೆ ನಮ್ಮ ಸರ್ಕಾರದ ಯೋಜನೆಗಳೇ ಕಾರಣ ಹೊರತು, ಇವರು ಕುರುಡಾಗಿ ಆರಾಧಿಸುವ ಮೋದಿಯವರಲ್ಲ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಹೊರತಾಗಿಯೂ ಬರದಿಂದ ತತ್ತರಿಸುವ ರೈತರಿಗೆ 2 ಸಾವಿರ ಪರಿಹಾರ ನೀಡುವ ಕೆಲಸ ಮಾಡುತ್ತಿದೆ. ರೈತರ ನೆರವಿಗಾಗಿ ಕೃಷಿ ಭಾಗ್ಯ ಜಾರಿಗೆ ತಂದಿದೆ. ಕೇಂದ್ರ ಸರ್ಕಾರದಿಂದ ರಾಜ್ಯದ ರೈತರಿಗೆ ಏನು ನೆರವು ಸಿಕ್ಕಿದೆ ಎಂದು ಹೇಳುವ ಧಮ್ ಅಶೋಕ್ರವರಿಗಿದೆಯೇ.? ಎಂದು ಪ್ರಶ್ನಿಸಿದ್ದಾರೆ.

ಎಲ್ಲದಕ್ಕೂ ಕೇಂದ್ರದತ್ತ ಬೊಟ್ಟು ಮಾಡುವುದು ಸರಿಯಲ್ಲ ಎಂದು ಅಶೋಕ್ ಹೇಳಿದ್ದಾರೆ. ವಿಪಕ್ಷ ನಾಯಕರಾದ ಅಶೋಕ್ರವರಿಗೆ ರಾಜ್ಯದ ಹಿತಾಸಕ್ತಿ ಕಾಪಾಡುವುದು ಮುಖ್ಯವೋ.? ಅಥವಾ ಕೇಂದ್ರದ ನಾಯಕರ ಕೃಪಕಟಾಕ್ಷಕ್ಕೆ ಪಾತ್ರರಾಗುವುದು ಮುಖ್ಯವೋ.? ನಿಮಗೆ ರಾಜ್ಯದ ರೈತರಿಗಿಂತ, ನಿಮ್ಮ ಕೇಂದ್ರ ನಾಯಕರ ಮರ್ಜಿ ಕಾಯುವುದು ಮುಖ್ಯ ಎಂದಾದರೆ, ನೀವು ವಿಪಕ್ಷ ಸ್ಥಾನ ಅಲಂಕರಿಸಿರುವುದು ಈ ನಾಡಿನ ದುರಂತ ಎಂದೇ ಭಾವಿಸಬೇಕಾಗುತ್ತದೆ.
ಮಾನ್ಯ ಅಶೋಕ್ರವರೆ, ನಾವು ಕೇಂದ್ರದ ಬಳಿ ಬಿಟ್ಟಿ ಕೊಡಿ ಎಂದು ಅಂಗಲಾಚುತ್ತಿಲ್ಲ. ನಮಗೆ ಬರಬೇಕಾದ ತೆರಿಗೆ ಅನುದಾನದ ಪಾಲು, ಬರ ಪರಿಹಾರದ ಪಾಲನ್ನು ಅಧಿಕಾರಯುತವಾಗಿ ಕೇಳುತ್ತಿದ್ದೇವೆ. ಅದು ನಮ್ಮ ನ್ಯಾಯಯುತವಾದ ಬೇಡಿಕೆ ಕೂಡ ಹೌದು. ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಆಗುತ್ತಿರುವ ತೆರಿಗೆ ಅನ್ಯಾಯದ ಬಗ್ಗೆ ಕಳೆದ ಒಂದು ವಾರದಿಂದ ಅನೇಕ ದಿನಪತ್ರಿಕೆಗಳಲ್ಲಿ ಸರಣಿ ವರದಿ ಪ್ರಕಟವಾಗಿದೆ. ಒಂದು ವೇಳೆ ಆ ವರದಿಗಳನ್ನು ನೀವು ಓದಿಲ್ಲವಾದರೆ, ಸಮಯಾವಕಾಶ ಮಾಡಿಕೊಂಡು ಓದಿ. ಆಗ ‘ಗುಳೆ ಭಾಗ್ಯ’ದ ಕೊಡುಗೆ ಯಾರದ್ದೆಂದು ತಿಳಿಯಲಿದೆ ಎಂದರು,

ರೈತರ ಬಗ್ಗೆ ಈಗ ಮೊಸಳೆ ಕಣ್ಣೀರು ಸುರಿಸುತ್ತಾ ಸಿದ್ದರಾಮಯ್ಯರ ಮಾನವೀಯತೆಯನ್ನು ಪ್ರಶ್ನಿಸುವ ಅಶೋಕ್ರವರಿಗೆ ಇದೇ ಪ್ರಶ್ನೆಯನ್ನು ಮೋದಿಯವರಿಗೆ ಕೇಳಲು ಸಾಧ್ಯವಿದೆಯೇ.? ವಾರ್ಷಿಕವಾಗಿ ರೈತರಿಗೆ 6 ಸಾವಿರ ಕೊಡುವುದನ್ನೇ ದೊಡ್ಡ ಸಾಧನೆ ಎಂದು TVಗಳಲ್ಲಿ 24 ಗಂಟೆ ಜಾಹಿರಾತು ಕೊಡುವ ಮೋದಿಯವರು, ಅದೇ ಜಾಹಿರಾತಿಗೆ ಕೊಟ್ಟ ಹಣವನ್ನು ಬರ ಪರಿಹಾರದ ರೂಪದಲ್ಲಿ ಕೊಟ್ಟಿದ್ದರೆ, ರಾಜ್ಯದ ರೈತರು ಇಷ್ಟು ಕಷ್ಟ ಎದುರಿಸಬೇಕಾದ ಪ್ರಮೇಯವೇ ಇರುತ್ತಿರಲಿಲ್ಲ.

ಅಶೋಕ್ರವರೆ, ಉತ್ತರ ಕುಮಾರನ ಪೌರುಷ ಒಲೆ ಮುಂದೆ ಎಂಬಂತೆ ನಮ್ಮ ಮುಂದೆ ನಿಮ್ಮ ಪೌರುಷ ತೋರಿಸಬೇಡಿ. ವಿಪಕ್ಷ ನಾಯಕನಂತಹ ಜವಬ್ಧಾರಿ ಸ್ಥಾನದಲ್ಲಿದ್ದೀರಿ. ನಿಮಗೇನಾದರೂ ರಾಜ್ಯದ ರೈತರ ಬಗ್ಗೆ ಅನುಕಂಪ,ಕರುಣೆ,ಕಾಳಜಿಯಿದ್ದರೆ ಕೇಂದ್ರದಿಂದ ನಿಯಮಾನುಸಾರ ನಮಗೆ ಬರಬೇಕಾದ ಬರಪರಿಹಾರ ಕೊಡಲು ಮೋದಿಯವರಿಗೆ ಹೇಳಿ. ಇಲ್ಲವಾದರೆ ಮೋದಿಯವರ ಎದುರು ಮಾತಾಡಲು ನಿಮಗೆ ಧೈರ್ಯವಿಲ್ಲ ಎಂದು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಿ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read