ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿಗಳು ಮೈಸೂರು ಚಲೋ ಆರಂಭಿಸಿದ್ದಾರೆ. ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೇ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಮೈಸೂರಿಗೆ ಪಾದಯಾತ್ರೆ ಹೊರಟಿದೆ.
ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಿಎಂ, ಕೇಂದ್ರ ಮಂತ್ರಿ HD ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಇದಾದ ಬಳಿಕ ಬಿಜೆಪಿ-ಜೆಡಿಎಸ್ ನಾಯಕರು ಒಟ್ಟಾಗಿ ಪಾದಯಾತ್ರೆ ಹೊರಟಿದ್ದಾರೆ.
ಸುರಿವ ಮಳೆಯನ್ನೂ ಲೆಕ್ಕಿಸದೇ ಬಿ.ವೈ ವಿಜಯೇಂದ್ರ , ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವರು ಪಾದಯಾತ್ರೆ ಕೈಗೊಂಡಿದ್ದಾರೆ. ಈ ಕುರಿತಾದ ವಿಡಿಯೋ, ಫೋಟೋವನ್ನು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.
ಕಾಂಗ್ರೆಸ್ ಸರ್ಕಾರ ರಾಜ್ಯದ ಶೋಷಿತರ 25 ಸಾವಿರ ಕೋಟಿ ರೂ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ. ದಮನಿತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸಿಗುತ್ತಿಲ್ಲ. ಗಂಗಾ ಕಲ್ಯಾಣ ಯೋಜನೆಯ ಬಾಕಿ ಹಣ ಕೊಟ್ಟಿಲ್ಲ. ಇದೆಲ್ಲದಕ್ಕೂ ಸಿಎಂ ಸಿದ್ದರಾಮಯ್ಯನವರು ಉತ್ತರ ಕೊಡಬೇಕು.
ಎನ್.ಮಹೇಶ್, ರಾಜ್ಯ ಉಪಾಧ್ಯಕ್ಷರು
ಭ್ರಷ್ಟ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನೇತೃತ್ವದ ಬೃಹತ್ ಪಾದಯಾತ್ರೆಗೆ ವ್ಯಾಪಕ ಜನ ಬೆಂಬಲದೊಂದಿಗೆ ಚಾಲನೆ ದೊರೆಯಿತು.
ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರು, ವಿರೋಧ ಪಕ್ಷ ನಾಯಕರಾದ ಶ್ರೀ @RAshokaBJP ಅವರು, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಶ್ರೀ @NswamyChalavadi , ವಿರೋಧ… pic.twitter.com/pfryloTACL
— BJP Karnataka (@BJP4Karnataka) August 3, 2024
Live:- ಮೈಸೂರು ಚಲೋ ಪಾದಯಾತ್ರೆ | Day 01 |#MysoreChalo #BJPJDSPadayatre #ScamSarkarahttps://t.co/9PYyS3Hzke
— BJP Karnataka (@BJP4Karnataka) August 3, 2024

