HomeKarnatakaದೇವದಾರಿ ಗಣಿಗಾರಿಕೆ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಮಾಹಿತಿ

ದೇವದಾರಿ ಗಣಿಗಾರಿಕೆ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಮಾಹಿತಿ

ಬೆಂಗಳೂರು: ಕೆಐಒಸಿಎಲ್ ನ ದೇವದಾರಿ ಗಣಿಗಾರಿಕೆಗೂ ನನಗೂ ಯಾವುದೇ ಸಂಬಂಧವಿಲ್ಲ ಈ ಕುರಿತಾದ ಕಡತವನ್ನು ನಾನು ಆರ್ಥಿಕ ಇಲಾಖೆಗೆ ಕಳುಹಿಸಿದ್ದೇನೆ ಅಷ್ಟೇ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕೆಐಒಸಿಎಲ್ ಗೆ ಅರಣ್ಯ ಜಮೀನು ನೀಡಲಾಗಿತ್ತು. ಯೋಜನೆ ಈವರೆಗೆ ಬಂದಿದೆ. ಕಂಪನಿಯ ಗಣಿಗಾರಿಕೆ ಆರಂಭಕ್ಕೆ 1738 ಕೋಟಿ ರೂ. ಬೇಕಿದೆ. ಅದಕ್ಕೆ ನಾನು ಸಹಿ ಹಾಕಿ ಆರ್ಥಿಕ ಇಲಾಖೆಗೆ ಕಳುಹಿಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಗಣಿಗಾರಿಕೆಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳು ಮುಗಿದಿವೆ. ಅರಣ್ಯ ಇಲಾಖೆಗೆ ಪರ್ಯಾಯ ಜಮೀನು ನೀಡಲಾಗಿದ್ದು, ರಾಜ್ಯ ಸರ್ಕಾರಕ್ಕೆ 518 ಕೋಟಿ ರೂಪಾಯಿ ಪಾವತಿಸಲಾಗಿದೆ. ಸಂಡೂರಿನ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಕೂಡ ಆಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಣಿಗಾರಿಕೆ ನಡೆಯುವ ದೇವದಾರಿ ಶ್ರೇಣಿಯಲ್ಲಿ ದಟ್ಟ ಅರಣ್ಯವಿಲ್ಲ. ಅಲ್ಲಿ ದೊಡ್ಡ ಗಾತ್ರದ ಮರಗಳು ಕೂಡ ಇಲ್ಲ. ಕುರುಚಲು ಗಿಡಗಳು ಇವೆ. ಸಾರ್ವಜನಿಕ ವಲಯದ ಕಂಪನಿ ಉಳಿಯಬೇಕು. ಉದ್ಯೋಗ ಸೃಷ್ಟಿಯಾಗಬೇಕು ಎಂಬ ಉದ್ದೇಶ ನನ್ನದಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular