HomeIndiaಬಿಸಿಸಿಐ ಹಂಗಾಮಿ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ನೇಮಕ

ಬಿಸಿಸಿಐ ಹಂಗಾಮಿ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ನೇಮಕ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಜಂಟಿ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರನ್ನು ಜಯ್ ಶಾ ಅವರ ನಿರ್ಗಮನದ ನಂತರ ಭಾರತೀಯ ಮಂಡಳಿಯ ಹಂಗಾಮಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಖಾಯಂ ಕಾರ್ಯದರ್ಶಿಯನ್ನು ನೇಮಿಸುವವರೆಗೆ ಮಂಡಳಿಯ ಅಧ್ಯಕ್ಷ ರೋಜರ್ ಬಿನ್ನಿ ಅವರು ತಮ್ಮ ಸಾಂವಿಧಾನಿಕ ಅಧಿಕಾರವನ್ನು ಬಳಸಿಕೊಂಡು ಬಿಸಿಸಿಐನ ನಿಯಮಗಳು ಮತ್ತು ನಿಬಂಧನೆಗಳ ಅಡಿಯಲ್ಲಿ ಸೈಕಿಯಾ ಅವರನ್ನು ಮಧ್ಯಂತರ ಅವಧಿಗೆ ಹಂಗಾಮಿ ಕಾರ್ಯದರ್ಶಿಯಾಗಿ ನೇಮಿಸಿದ್ದಾರೆ.

ಮಾಜಿ ಪ್ರಥಮ ದರ್ಜೆ ಕ್ರಿಕೆಟಿಗ ಮತ್ತು ರಾಜ್ಯದ ಅಡ್ವೊಕೇಟ್ ಜನರಲ್ ಆಗಿರುವ ಸೈಕಿಯಾ ಅವರಿಗೆ ಕಾರ್ಯದರ್ಶಿ ಅಧಿಕಾರವನ್ನು ಹಸ್ತಾಂತರಿಸಲು ಸೂಚಿಸಿದ್ದಾರೆ. ಅವರು ಮುಂದಿನ ವರ್ಷ ಸೆಪ್ಟೆಂಬರ್‌ವರೆಗೆ ಈ ಹುದ್ದೆಯಲ್ಲಿ ಮುಂದುವರಿಯುವ ನಿರೀಕ್ಷೆಯಿದೆ. ನಂತರ ಖಾಲಿ ಹುದ್ದೆಗೆ ಖಾಯಂ ಕಾರ್ಯದರ್ಶಿ ನೇಮಕ ಮಾಡಲಾಗುವುದು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular