ಬೆಂಗಳೂರು: ದೇವನಹಳ್ಳಿಯಲ್ಲಿ ರೈತರ ಭೂಮಿ ಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಮತ್ತೊಂದೆಡೆ ರೈತರು, ರೈತಮುಖಂಡರು ತರಕಾರಿ, ಹಣ್ಣು, ಹೂಗಳ ಸಮೇತವಾಗಿ ವಿಧಾನಸೌಧಕ್ಕೆ ಎಂಟ್ರಿಕೊಟ್ಟಿದ್ದಾರೆ.
ತಾವು ಬೆಳೆದ ಬೆಳೆ, ತರಕಾರಿ, ಹೂವು, ಹಣ್ಣುಗಳ ಬುಟ್ಟಿ ಸಮೇತ ವಿಧಾನಸೌಧಕ್ಕೆ ಆಗಮಿಸಿದ ರೈತರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತರ ಜಮೀನು ಸಾಧೀನ ಪಡಿಸಿಕೊಳ್ಳದಂತೆ ಮನವಿ ಮಾಡಿದರು.
ದೇವನಹಳ್ಳಿ ಭಾಗದ 13 ಹಳ್ಳಿಗಳ ಸುತ್ತ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಇದರ ವಿರುದ್ಧ ರೈತರು ಸಿಡಿದೆದ್ದಿದ್ದು, ತಮ್ಮ ಜಮೀನು ಉಳಿಸಿಕೊಳ್ಳಲು ಹೋರಾಟ ನಡೆಸಿದ್ದಾರೆ. ದೇವನಹಳ್ಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಿಲ್ಲಿಸುವಂತೆ ಅನ್ನದಾತರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಇಂದು ಮಧ್ಯಾಹ್ನ ದೇವನಹಳ್ಳಿ ವಿಭಾಗದ ರೈತರು, ರೈತ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ.