ದೇವನಹಳ್ಳಿ: ಕಾರ್ಪೆಂಟರ್ ಕೆಲಸಕ್ಕೆ ಹೋಗಿದ್ದ ವ್ಯಕ್ತಿ ಇದೀಗ ಕೆರೆಯ ಅಂಗಳದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೊಡ್ದಸಾಗನಹಳ್ಳಿಯಲ್ಲಿ ನಡೆದಿದೆ.
ರಾಜೇಶ್ (38) ಎಂಬ ವ್ಯಕ್ತಿ ದೊಡ್ಡಸಾಗನಹಳ್ಳಿ ಕೆರೆ ಅಂಗಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ. ಬಳಿಕ ಕೆರೆ ಅಂಗಳಕ್ಕೆ ಶವ ತಂದು ಬಿಸಾಕಿ ಹೋಗಿದ್ದಾರೆ.
ಎರಡು ದಿನಗಳ ಹಿಂದೆ ರಾಜೇಶ್ ಕಾರ್ಪೆಂಟರ್ ಕೆಲಸಕ್ಕೆ ಎಂದು ಹೋಗಿದ್ದರು. ಮನೆಗೆ ವಾಪಾಸ್ ಆಗಿರಲಿಲ್ಲ. ಇದರಿಂದ ಆತಂಕಗೊಂಡಿದ್ದ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ರಾಜೇಶ್ ಶವ ಕೆರೆ ಅಂಗಳದಲ್ಲಿ ಪತ್ತೆಯಾಗಿದೆ. ರಾಜ್ರೇಶ್ ನನ್ನು ಕೊಲೆ ಮಾಡಿ ಶವ ಬಿಸಿಕಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ವಿಶ್ವನಾಥಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

