HomeKarnatakaBIG NEWS: ಸರ್ಕಾರಿ ಜಮೀನಿಗೆ ನಕಲಿ ದಾಖಲೆಗಳು ಸೃಷ್ಟಿ; ಲೋಕಾಯುಕ್ತ ದಾಳಿ ವೇಳೆ ಬಯಲಾಯ್ತು ಇನ್ನಷ್ಟು...

BIG NEWS: ಸರ್ಕಾರಿ ಜಮೀನಿಗೆ ನಕಲಿ ದಾಖಲೆಗಳು ಸೃಷ್ಟಿ; ಲೋಕಾಯುಕ್ತ ದಾಳಿ ವೇಳೆ ಬಯಲಾಯ್ತು ಇನ್ನಷ್ಟು ಅಕ್ರಮ; ತಹಶೀಲ್ದಾರ್ ಗೆ ಸಂಕಷ್ಟ

ಬೆಂಗಳೂರು: ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಮನೆ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳಿಗೆ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿದ್ದು, ಹಲವು ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ ಮಾಡಿರುವುದು ಪತ್ತೆಯಾಗಿದೆ.

ರಾಜ್ಯದ ವಿವಿಧೆಡೆ ನಿನ್ನೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಭ್ರಷ್ಟರ ವಿರುದ್ಧ ಸಮರ ಸಾರಿದ್ದರು. ಇದೇ ವೇಳೆ ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಮನೆ ಮೇಲೆ ದಾಳಿ ನಡೆಸಿದಾಗ 50 ಲಕ್ಷಕ್ಕೂ ಅಧಿಕ ಹಣ, ಅಪಾರ ಪ್ರಮಾಣದ ಚಿನ್ನಾಭರಣ, ಭೂಸ್ವಾಧೀನದ ನಕಲಿ ದಾಖಲೆಗಳು ಪತ್ತೆಯಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಹಶೀಲ್ದಾರ್ ದಾಖಲೆಗಳ ಜೊತೆ ಅವರ ಮೊಬೈಲ್ ಕೂಡ ವಶಕ್ಕೆ ಪಡೆದುಕೊಂಡಿರುವ ಲೋಕಾಯುಕ್ತರು, ತನಿಖೆ ಮುಂದುವರೆಸಿದ್ದಾರೆ. ದೇವನಹಳ್ಳಿ ಬಳಿ ಕೆಐಡಿಬಿಗೆ ಹೋಗುತ್ತಿರುವ ಜಮೀನುಗಳಲ್ಲಿ ಹಲವು ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ ಮಾಡಿದ್ದಾರೆ. ಆರ್ ಐ, ವಿಐ ನೀಡಿದ್ರೂ ಉಲ್ಲಂಘಿಸಿ ದಾಖಲೆ ಮಾಡಿ ಅಕ್ರಮ ಮಾಡಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಶಿವರಾಜ್ ಗೆ ಸಂಕಷ್ಟ ಎದುರಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular