HomeKarnatakaBIG NEWS: ಪೆನ್ ಡ್ರೈವ್ ಬಗ್ಗೆ ಡಿಸಿಎಂ ಡಿಕೆ ಮಹತ್ವದ ಮಾಹಿತಿ: ನನಗೂ ಪ್ರಕರಣಕ್ಕೂ ಸಂಬಂಧವಿಲ್ಲವೆಂದು...

BIG NEWS: ಪೆನ್ ಡ್ರೈವ್ ಬಗ್ಗೆ ಡಿಸಿಎಂ ಡಿಕೆ ಮಹತ್ವದ ಮಾಹಿತಿ: ನನಗೂ ಪ್ರಕರಣಕ್ಕೂ ಸಂಬಂಧವಿಲ್ಲವೆಂದು ಸ್ಪಷ್ಟನೆ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದ ಹಿಂದೆ ಡಿಸಿಎಂ .ಡಿ.ಕೆ. ಶಿವಕುಮಾರ್ ಅವರಿದ್ದಾರೆ ಎಂದು ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ ಆರೋಪಿಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ನನಗೂ ಪೆನ್ ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

ನನ್ನ ವಿರುದ್ಧ ಆರೋಪಿಸಿರುವ ದೇವರಾಜೇಗೌಡ ಬಿಜೆಪಿ ಕಾರ್ಯಕರ್ತರಾಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರ ಆಣತಿಯಂತೆ ನನ್ನ ವಿರುದ್ಧ ಸುಳ್ಳು ಆಪಾದನೆ ಮಾಡಿದ್ದಾರೆ. ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರ ರಹಿತವಾಗಿವೆ. ದೇವರಾಜ ಗೌಡರ ಹಿಂದೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಅವರು ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದಾರೆ ಎಂದು ಡಿಸಿಎಂ ತಿಳಿಸಿದ್ದಾರೆ.

ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್ ಮತ್ತು ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ. ಡ್ಯಾಮೇಜ್ ಕಂಟ್ರೋಲ್ ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ದೇವರಾಜೇಗೌಡ ಮೂಲಕ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿಸಿದ್ದಾರೆ. ಇದೇ ದೇವರಾಜೇಗೌಡ ಸುದ್ದಿಗೋಷ್ಠಿ ನಡೆಸಿ ಪೆನ್ ಡ್ರೈವ್ ಇದೆ ಎಂದು ಹೇಳಿದ್ದರು. ಬಿಜೆಪಿ ನಾಯಕರ ಅನುಮತಿ ಪಡೆದು ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಹೀಗಿರುವಾಗ ನನಗೂ ಪೆನ್ ಡ್ರೈವ್ ಬಿಡುಗಡೆಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇವರಾಜೇಗೌಡ ಮಾಡುವುದೆಲ್ಲ ಮಾಡಿ ಈಗ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇದರ ಹಿಂದೆ ಬಿಜೆಪಿ ಜೆಡಿಎಸ್ ನಾಯಕರ ಷಡ್ಯಂತ್ರ ಇದೆ. ಬೆಂಗಳೂರಿನಿಂದ ಹೊರಗಿದ್ದು ಬಂದ ನಂತರ ಮಾತನಾಡುತ್ತೇನೆ ಎಂದು ಡಿಸಿಎಂ ಡಿಕೆ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular