HomeAutoಅಪಘಾತದಲ್ಲಿ ಸಂಪೂರ್ಣ ಜಖಂಗೊಂಡ 3 ಕೋಟಿ ರೂ. ಮೌಲ್ಯದ ಕಾರು; ಕ್ಯಾಮರಾದಲ್ಲಿ ಭೀಕರ ದೃಶ್ಯ ಸೆರೆ

ಅಪಘಾತದಲ್ಲಿ ಸಂಪೂರ್ಣ ಜಖಂಗೊಂಡ 3 ಕೋಟಿ ರೂ. ಮೌಲ್ಯದ ಕಾರು; ಕ್ಯಾಮರಾದಲ್ಲಿ ಭೀಕರ ದೃಶ್ಯ ಸೆರೆ

ಮೆಲ್ಬೋರ್ನ್‌: ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಒಂದಕ್ಕೊಂದು ಡಿಕ್ಕಿಯಾಗಿ ವಾಹನಗಳ ಅಪಘಾತ ಸಂಭವಿಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕ್ಯಾಮರಾದಲ್ಲಿ ಸೆರೆಹಿಡಿಯಲಾದ ದೃಶ್ಯದಲ್ಲಿ ಕೆಂಪು ಫೆರಾರಿ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ, 3.28 ಕೋಟಿ ರೂ. ಬೆಲೆಯ ಫೆರಾರಿ 360 ಚಾಲೆಂಜ್ ಸ್ಟ್ರಾಡೇಲ್ ನಿಸ್ಸಾನ್ ಕಾರೊಂದಕ್ಕೆ ಡಿಕ್ಕಿಯಾಗಿ ಜಖಂಗೊಂಡಿದೆ. ಆ ಕಾರು ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಮೊಲ್ಲರ್‌ನ ರಿಯರ್ ವ್ಯೂ ಡ್ಯಾಶ್‌ಕ್ಯಾಮ್‌ನಲ್ಲಿ ಈ ದೃಶ್ಯ ಸೆರೆಯಾಗಿದೆ.

ವರದಿಗಳ ಪ್ರಕಾರ, ಎರಿಕ್ ಮೊಲ್ಲರ್ ಎಂಬಾತ ತನ್ನ ಕುಟುಂಬದೊಂದಿಗೆ ಮನೆಗೆ ಚಾಲನೆ ಮಾಡುವಾಗ ತನ್ನ ಹಿಂಬದಿಯ ಡ್ಯಾಶ್‌ಕ್ಯಾಮ್‌ನೊಂದಿಗೆ ವಿಡಿಯೋವನ್ನು ಸೆರೆಹಿಡಿದಿದ್ದಾನೆ. ವಿರುದ್ಧ ದಿಕ್ಕಿನಲ್ಲಿ ಪ್ರಯಾಣಿಸುತ್ತಿದ್ದ ಫೆರಾರಿ ಮೊಲ್ಲರ್ ಅವರ ಹಿಂಬದಿಯಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿಗೆ ಹೊಡೆದಿದೆ. ಈ ವೇಳೆ ಮತ್ತೊಂದು ಕಾರು ಕೂಡ ಅಪಘಾತಕ್ಕೀಡಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂಬಂಧ ವಿಕ್ಟೋರಿಯಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಫೆರಾರಿ, ನಿಸ್ಸಾನ್ ಮತ್ತು ಸುಬಾರು ಇಂಪ್ರೆಜಾ ಕಾರುಗಳ ನಡುವಿನ ಅಪಘಾತದ ಬಗ್ಗೆ ತನಿಖೆ ನಡೆಸುತ್ತಿದ್ದು, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular