HomeIndiaBIG BREAKING NEWS: ದೆಹಲಿಯಲ್ಲಿ ಬಿಜೆಪಿ ನಾಯಕರ ಭೇಟಿ ಮಾಡಿದ ದೇವೇಗೌಡರು: ನಾಳೆ ಜೆಡಿಎಸ್ NDA...

BIG BREAKING NEWS: ದೆಹಲಿಯಲ್ಲಿ ಬಿಜೆಪಿ ನಾಯಕರ ಭೇಟಿ ಮಾಡಿದ ದೇವೇಗೌಡರು: ನಾಳೆ ಜೆಡಿಎಸ್ NDA ಸೇರುವ ಸಾಧ್ಯತೆ

ನವದೆಹಲಿ: ಮಾಜಿ ಪ್ರಧಾನಿ ಮತ್ತು ಜನತಾದಳ(ಜಾತ್ಯತೀತ) ಮುಖ್ಯಸ್ಥ ಹೆಚ್‌.ಡಿ. ದೇವೇಗೌಡ ಮತ್ತು ಅವರ ಪುತ್ರ ಹೆಚ್‌.ಡಿ. ಕುಮಾರಸ್ವಾಮಿ ಅವರು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.

2024 ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕುರಿತು ಚರ್ಚಿಸಲು ಸಭೆ ನಡೆಸಲಾಯಿತು. ಸಾರ್ವತ್ರಿಕ ಚುನಾವಣೆಯ ಸೀಟು ಹಂಚಿಕೆ ಸೂತ್ರಗಳ ಬಗ್ಗೆಯೂ ನಾಯಕರು ಚರ್ಚೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇವೇಗೌಡ ಮತ್ತು ಕುಮಾರಸ್ವಾಮಿ ಇಬ್ಬರೂ ನಾಳೆ ಶುಕ್ರವಾರ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ಕ್ಕೆ ಜೆಡಿಎಸ್ ಪ್ರವೇಶದ ಔಪಚಾರಿಕ ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular