HomeKarnatakaಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ಜವರಮ್ಮ ನಿಧನ

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ಜವರಮ್ಮ ನಿಧನ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ. ಅವರಿಗೆ (88) ವರ್ಷ ವಯಸ್ಸಾಗಿತ್ತು.

ಅನಾರೋಗ್ಯದಿಂದ ಬಳಲುತ್ತಿದ್ದ ಜವರಮ್ಮ ಅವರಿಗೆ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ತಂಗಿಯ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಕಂಬನಿ ಮಿಡಿದಿದ್ದಾರೆ.

ಹೊಳೆನರಸಿಪುರದ ಬಸವನಾಯಕನಹಳ್ಳಿಯಲ್ಲಿ ಇಂದು ಸಂಜೆ ಜವರಮ್ಮ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular