HomeLatest NewsBIG NEWS : ಮೇ 29 ರಿಂದ 'ವಿಕಸಿತ ಕೃಷಿ ಸಂಕಲ್ಪ ಅಭಿಯಾನ' ; “ವಿಜ್ಞಾನಿಗಳ...

BIG NEWS : ಮೇ 29 ರಿಂದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ ; “ವಿಜ್ಞಾನಿಗಳ ನಡೆ ರೈತರ ಕಡೆ” ಕಾರ್ಯಕ್ರಮ

ನವದೆಹಲಿ : ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ಹಾಗೂ ಅದರ ವಿವಿಧ ಅಂಗ ಸಂಸ್ಥೆಗಳು, ಕೃಷಿ ವಿಶ್ವವಿದ್ಯಾಲಯಗಳು, ಕೃಷಿ ವಿಜ್ಞಾನ ಕೇಂದ್ರಗಳು, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಈ ಮುಂಗಾರು ಹಂಗಾಮಿನಲ್ಲಿ ಕೃಷಿಕರಿಗೆ ವಿವಿಧ ಕೃಷಿ ತಾಂತ್ರಿಕತೆಗಳು ಲಭ್ಯವಾಗುವಂತೆ ಮೇ 29 ರಿಂದ ಜೂನ್ 12 ರವರೆಗೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಕೃಷಿ ಸಂಶೋಧನೆ ಮತ್ತು ರೈತ ಸಮುದಾಯದ ನಡುವಿನ ಅಂತರವನ್ನು ಕಡಿಮೆ ಮಾಡುವುದು ಈ ಅಭಿಯಾನದ ಉದ್ದೇಶವಾಗಿದೆ. ಕೃಷಿ ಜ್ಞಾನವನ್ನು ನೇರವಾಗಿ ರೈತರ ಜಮೀನುಗಳಿಗೆ ಕೊಂಡೊಯ್ಯುವ ಮೂಲಕ ಈ ಅಭಿಯಾನವನ್ನು ಭಾರತ ಸರ್ಕಾರದ ಭಾರತೀಯ ಕೃಷಿ ಸಂಶೋಧನಾ ಅನುಸಂಧಾನ ಪರಿಷತ್ನ ವಿಜ್ಞಾನಿಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳನ್ನು ಒಳಗೊಂಡ ಎರಡು ಮತ್ತು ಮೂರು ತಂಡಗಳ ಮೂಲಕ ಕಾರ್ಯಗತಗೊಳಿಸಲಾಗುತ್ತಿದೆ.

ಈ ವಿನೂತನ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ರೈತರ ಬಳಿ ತೆರಳಿ, ಜಿಲ್ಲೆಯ ಎಲ್ಲ ರೈತರಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಾಹಿತಿ ನೀಡುವರು. ಇಲ್ಲಿ ರೈತರನ್ನು ಒಗ್ಗೂಡಿಸಿ ನೂತನ ತಂತ್ರಜ್ಞಾನಗಳು, ಹೊಸ ತಳಿಗಳು ಮತ್ತು ಬೀಜಗಳು, ನಿಖರವಾದ ಹವಾಮಾನದ ಮಾಹಿತಿ ಮತ್ತು ಸರ್ಕಾರದ ನಾನಾ ಲಾಭದಾಯಕ ಯೋಜನೆಗಳು, ಕೃಷಿಯಲ್ಲಿ ಹೆಚ್ಚಿನ ಲಾಭವನ್ನು ಹೇಗೆ ಪಡೆಯಬಹುದು ಎಂಬ ಬಗ್ಗೆ ಮಾಹಿತಿ ನೀಡಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈತರು ನೀಡುವ ಪ್ರತಿಕ್ರಿಯೆಗಳನ್ನು ಸಂಗ್ರಹಿಸಿ ಅವರ ಹೊಸ ಆವಿಷ್ಕಾರಗಳನ್ನು ಸಂಶೋಧನೆ ಮತ್ತು ಪ್ರಸಾರ ಚಟುವಟಿಕೆಗಳಲ್ಲಿ ಬಳಸಲಾಗುತ್ತದೆ. ಬೆಳೆ, ಮಣ್ಣು ಮತ್ತು ಲಭ್ಯವಿರುವ ಸಂಪನ್ಮೂಲಗಳ ಆಧಾರದ ಮೇಲೆ ತಜ್ಞರಿಂದ ಸಲಹೆ ನೀಡಲಾಗುತ್ತದೆ. ಜೊತೆಗೆ ಸರ್ಕಾರದ ಯೋಜನೆಗಳ ಲಾಭ ಪಡೆಯುವ ವಿಧಾನಗಳ ಕುರಿತು ಸಂಪೂರ್ಣ ಮಾಹಿತಿ ನೀಡಲಾಗುತ್ತದೆ.

ಜಿಲ್ಲೆಯ ಆಯಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳ ಮೂಲಕ ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ತಂಡ ಭೇಟಿ ನೀಡುವ ಬಗ್ಗೆ ಅಲ್ಲಿಯ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ.ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ತಂಡ ಆಯಾ ಗ್ರಾಮಗಳಿಗೆ ಬಂದಾಗ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ಕಾರ್ಯಕ್ರಮದ ಲಾಭ ಪಡೆದು ಕೃಷಿಯನ್ನು ಲಾಭದಾಯಕವಾಗಿಸಿಕೊಳ್ಳಬಹುದು ಎಂದು ಬಳ್ಳಾರಿಯ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ.ಪಾಲಯ್ಯ.ಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular