HomeKarnataka43 ಕೋಟಿ ರೂ. ವೆಚ್ಚದಲ್ಲಿ 15 ಕೆರೆಗಳ ಅಭಿವೃದ್ದಿ

43 ಕೋಟಿ ರೂ. ವೆಚ್ಚದಲ್ಲಿ 15 ಕೆರೆಗಳ ಅಭಿವೃದ್ದಿ

ಶಿವಮೊಗ್ಗ: ಪರಿಸರ ಸಂರಕ್ಷಣೆ ಮತ್ತು ನಗರವನ್ನು ಸುಂದರ ಹಾಗೂ ಹಸಿರಾಗಿಸುವ ಉದ್ದೇಶದಿಂದ ರೂ.43 ಕೋಟಿ ವೆಚ್ಚದಲ್ಲಿ 15 ಕೆರೆಗಳನ್ನು ಸೂಡಾ ವ್ಯಾಪ್ತಿಯಲ್ಲಿ ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ತಿಳಿಸಿದರು.

 ಬುಧವಾರ ನಗರದ ಪ್ರಿಯದರ್ಶಿನಿ ಬಡಾವಣೆಯಲ್ಲಿ ಬರುವ ಆಲ್ಕೊಳ ಗ್ರಾಮದ ಸರ್ವೇ ನಂ 110 ರ ಕೆರೆ ಪ್ರದೇಶದಲ್ಲಿ ಕೆರೆ ಅಭಿವೃದ್ದಿ ಕಾಮಗಾರಿಗಳ ಮಾಹಿತಿಯನ್ನು ಹಂಚಿಕೊಂಡು ಅವರು ಮಾತನಾಡಿದರು.

 ಕೆರೆಯಲ್ಲಿ ಹೂಳು ತೆಗೆಸಿ, ಸುತ್ತಲೂ ಬೇಲಿ ಹಾಕಿಸಿ, ಬಂಡಿಂಗ್ ಮಾಡುವುದು, ಜೊತೆಗೆ ಕೆರೆ ಸುತ್ತಲೂ ಗಿಡಗಳನ್ನು ನೆಡಲಾಗುವುದು. ಮಕ್ಕಳಿಗೆ ಆಟಿಕೆಗಳನ್ನು ಅಳವಡಿಸಲಾಗುವುದು. ಚರಂಡಿ ನೀರು ಕೆರೆಗಳಿಗೆ ಬರುವುದನ್ನು ತಪ್ಪಿಸಲು ಕ್ರಮ ವಹಿಸಲಾಗುವುದು. ಕೆಲವು ಕೆರೆಗಳನ್ನು ಐಲ್ಯಾಂಡ್ ಮಾದರಿಯಲ್ಲಿ ಅಭಿವೃದ್ದಿಪಡಿಸಲಾಗುವುದು. ಈ ಕೆರೆಗಳ ಅಭಿವೃದ್ದಿಯಿಂದ ಪರಿಸರ ಸಂರಕ್ಷಣೆಯೊAದಿಗೆ ಅಂತರ್ಜಲ ಮಟ್ಟವೂ ಹೆಚ್ಚಲಿದೆ. ವಾತಾವರಣವೂ ಉತ್ತಮವಾಗಿರಲಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆರೆ ಅಭಿವೃದ್ದಿ ಟೆಂಡರ್ ಆದ ಕಾಮಗಾರಿಗಳ ವಿವರ:

ರೂ.3.12 ಕೋಟಿ ವೆಚ್ಚದಲ್ಲಿ ಆಲ್ಕೊಳದ ಸ. ನಂ 73 ರಲ್ಲಿ 1 ಕೆರೆ, ನವುಲೆಯ ಸ.ನಂ 110 ಮತ್ತು 88 ರಲ್ಲಿ 2 ಕೆರೆಗಳು, ಮಲ್ಲಿಗೇನಹಳ್ಳಿಯ ಸ.ನಂ 30 ರಲ್ಲಿ 1 ಕೆರೆ, ರೂ.2.24 ಕೋಟಿ ವೆಚ್ಚದಲ್ಲಿ ಬೊಮ್ಮನಕಟ್ಟೆ ಗ್ರಾಮದ ಸ.ನಂ.102 ರಲ್ಲಿ 2 ಎಕರೆ 11 ಗುಂಟೆ ವಿಸ್ತೀರ್ಣದ ಕೆರೆ, ಆಲ್ಕೊಳ ಗ್ರಾಮದ ಸ.ನಂ 5 14 ಎಕರೆ 9 ಗು. ವಿಸ್ತೀರ್ಣದ 1 ಕೆರೆ, ಕಾಶಿಪುರ ಸ.ನಂ 62ರಲ್ಲಿ 7 ಎ 32 ಗು. ವಿಸ್ತೀರ್ಣದ 01 ಕೆರೆ, ಮಲ್ಲಿಗೇನಹಳ್ಳಿ ಗ್ರಾಮದ ಸ.ನಂ.25 ರಲ್ಲಿ 4 ಎಕರೆ 24 ಗುಂಟೆ, ಮತ್ತೂರು ಗ್ರಾಮದ ಸ.ನಂ.793 ರಲ್ಲಿ 1 ಕೆರೆ, ಭದ್ರಾವತಿ ತಾಲ್ಲೂಕಿನ ಜನ್ನಾಪುರ ಗ್ರಾಮದ ಸ.ನಂ 70 ರಲ್ಲಿ 45 ಎಕರೆ 20 ಗುಂಟ 1 ಕೆರೆ, ಭದ್ರಾವತಿ ತಾಲ್ಲೂಕಿನ ಉಜ್ಜಯನಿಪುರ ಸ.ನಂ.13 ರಲ್ಲಿ 6 ಎಕರೆ 18 ಗುಂಟೆ ಯಲ್ಲಿ 1 ಕೆರೆ ಸೇರಿ ಒಟ್ಟು 10 ಕೆರೆಗಳ ಅಭಿವೃದ್ದಿಗೆ ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದೆ.

ತಾಂತ್ರಿಕ ಮಂಜೂರಾತಿಗೆ ಸಲ್ಲಿಸಿದ ವಿವರ:

ದೇವಕಾತಿಕೊಪ್ಪ ಗ್ರಾಮದ ಸ.ನಂ 47 ರಲ್ಲಿ 22 ಎ 30 ಗು. 01 ಕೆರೆ, ಚನ್ನಮುಂಬಾಪುರ ಗ್ರಾಮ ಸ.ನಂ.11 ರಲ್ಲಿ 10 ಎ 23 ಗು, ಬೊಮ್ಮನಕಟ್ಟೆ ಸ.ನಂ.114 ರಲ್ಲಿ 24 ಎ 14 ಗುಂಟೆಯಲ್ಲಿ 01, ಆಲ್ಕೊಳ ಗ್ರಾಮದ ಸ.ನಂ 10 ರಲ್ಲಿ 1 ಎ 2 ಗುಂಟೆಯಲ್ಲಿ 01, ಭದ್ರಾವತಿ ತಾಲ್ಲೂಕಿನ ಹೊಸೂರು-ಸಿದ್ದಾಪುರ ಗ್ರಾಮದ ಸ.ನಂ 110 ರಲ್ಲಿ 24 ಎ 19 ಗುಂಟೆಯಲ್ಲಿ 01 ಕೆರೆ ಒಟ್ಟು 5 ಕೆರೆಗಳ ಅಭಿವೃದ್ದಿ ಕಾಮಗಾರಿಗಳು ತಾಂತ್ರಿಕ ಮಂಜೂರಾತಿಗೆ ಸಲ್ಲಿಕೆಯಾಗಿವೆ ಎಂದು ತಿಳಿಸಿದರು.

ಸೂಡಾ ವತಿಯಿಂದ ಕೈಗೊಳ್ಳಲು ಉದ್ದೇಶಿಸಿರುವ ಪ್ರಾಧಿಕಾರದ ಮಾಲೀಕತ್ವದ ನಿದಿಗೆ ಗ್ರಾಮದ ಸ.ನಂ25 ರ 3 ಎಕರೆ ಪ್ರದೇಶದಲ್ಲಿ ವಸತಿ ಬಡಾವಣೆಯ ಅಭಿವೃದ್ದಿ ಕಾಮಗಾರಿಯ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ಪಡೆಯಲು ಆಯುಕ್ತಾಲಯಕ್ಕೆ ಸಲ್ಲಿಸಲಾಗಿದೆ.

ಗೋಪಿಶೆಟ್ಟಿ ಗ್ರಾಮದ ವಿವಿಧ ಸರ್ವೇ ನಂ.ಗಳಲ್ಲಿ ಒಟ್ಟು 3 ಎಕರೆ ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಿಸಲು ವಿನ್ಯಾಸ ನಕ್ಷೆಗೆ ತಾಂತ್ರಿಕ ಅನುಮೋದನೆ ಪಡೆಯಲು ಇಲಾಖೆಗೆ ಸಲ್ಲಿಸಲಾಗಿರುತ್ತದೆ. ನಿದಿಗೆ ಹೋಬಳಿ ಊರಗಡೂರು ಗ್ರಾಮದ ಉದ್ದೇಶಿತ ವಸತಿ ಬಡಾವಣೆಯಲ್ಲಿ ಸುಮಾರು 4 ಎಕರೆ ವಿಸ್ತೀರ್ಣದಲ್ಲಿ ವಸತಿ ಸಮುಚ್ಚಯ ನಿರ್ಮಾಣ ಸಂಬಂಧ ಪೂರ್ವಾನುಮತಿಗೆ ಆಯುಕ್ತಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಭದ್ರಾವತಿ ತಾಲ್ಲೂಕಿನ ಕಸಬಾ ಗ್ರಾಮದಲ್ಲಿ ಒಟ್ಟು 32 ಎಕರೆ 21 ಗುಂಟೆ ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಿಸಲು ವಿನ್ಯಾಸ ನಕ್ಷೆಗೆ ತಾಂತ್ರಿಕ ಅನುಮೋದನೆ ಪಡೆಯಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇತ್ತೀಚೆಗೆ ನಗರದಲ್ಲಿ ಉಷ್ಣಾಂಶ ಹೆಚ್ಚುತ್ತಿದ್ದು, ನಗರವನ್ನು ಹಸಿರಾಗಿ ಇಟ್ಟುಕೊಳ್ಳುವುದು ಅತಿ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಪಾರ್ಕ್ ಗಳನ್ನು ಅಭಿವೃದ್ದಿಪಡಿಸಲಾಗುತ್ತಿದೆ. ಈ ಹಿಂದೆ 40 ಪಾರ್ಕ್ ಗಳನ್ನು ಅಭಿವೃದ್ದಿಪಡಿಸಲಾಗಿತ್ತು. ಇದೀಗ 50 ಪಾರ್ಕ್ ಗಳ ಅಭಿವೃದ್ದಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

 ಈ ವೇಳೆ ಸ್ಥಳೀಯ ಜನ ಪ್ರತಿನಿಧಿಗಳು, ಬಡಾವಣೆಗಳ ನಿವಾಸಿಗಳು ಹಾಜರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular