ಬೆಂಗಳೂರು : ದೇವರಗುಡ್ಡ ಗ್ರಾಮವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು. ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಇರುವ ತಡೆಯಾಜ್ಞೆ ತೆರವುಗೊಳಿಸಲು ಕಾನೂನು ಹೋರಾಟ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿರುವ ಮಾಲತೇಶ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿ, ಜನರ ಕಲ್ಯಾಣಕ್ಕಾಗಿ ಪ್ರಾರ್ಥಿಸಿದೆ. #ಹಾವೇರಿ #ಮಾಲತೇಶಸ್ವಾಮಿ pic.twitter.com/yeooZVqtIo
— Siddaramaiah (@siddaramaiah) August 30, 2024

