ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ವ್ಯಾಪ್ತಿಗೆ ಬರುವ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್(ಕೆಎಸ್‌ಎಂಸಿಎಲ್) ಸಂಸ್ಥೆಯಿಂದ ಶಾಲೆಗಳ ಕೊಠಡಿಗಳ ನಿರ್ಮಾಣ, ವಾಣಿಜ್ಯ ಸಮುಚ್ಚಯ ಕಟ್ಟಡ ನಿರ್ಮಾಣದ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಕೆಎಸ್ಎಂಸಿಎಲ್ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಭಿವೃದ್ಧಿ ಕಾರ್ಯಗಳು ಕುರಿತಾಗಿ ಮಾಹಿತಿ ಪಡೆದುಕೊಂಡಿದ್ದಾರೆ.
ಕೆಎಸ್‌ಎಂಸಿಎಲ್ ನಿಂದ ಸರ್ಕಾರಿ ಶಾಲಾ ಕೊಠಡಿಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒಟ್ಟು 14.68 ಕೋಟಿ ರೂ.ಗಳನ್ನು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯಲ್ಲಿ ವಿನಿಯೋಗಿಸಲಾಗುವುದು ಎಂದು ಅವರು ಹೇಳಿದ್ದಾರೆ.