HomeKarnatakaಶ್ರೀ ಕ್ಷೇತ್ರ ಗಾಣಗಾಪುರದ ಅಭಿವೃದ್ಧಿ; ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು?

ಶ್ರೀ ಕ್ಷೇತ್ರ ಗಾಣಗಾಪುರದ ಅಭಿವೃದ್ಧಿ; ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು?

ಶ್ರೀ ಕ್ಷೇತ್ರ ಗಾಣಗಾಪುರದ ಅಭಿವೃದ್ಧಿ ಕುರಿತು ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿದ್ದಾರೆ. ಅಫಜಲಪುರ ಮತಕ್ಷೇತ್ರದ ಪವಿತ್ರ ತಾಣ, ಶ್ರೀ ಕ್ಷೇತ್ರ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದ ಅಧೀನದಲ್ಲಿರುವ ಶ್ರೀ ತಂತುಕೇಶ್ವರ ದೇವಸ್ಥಾನದ ‘ಅನ್ನದಾಸೋಹ ಭವನ’ಕ್ಕೆ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಕಾರ್ಯಕ್ರಮದ ಪಾಲ್ಗೊಂಡಿದ್ದ ಸಚಿವ ರಾಮಲಿಂಗಾ ರೆಡ್ಡಿ ಶ್ರೀ ದತ್ತಾತ್ರೇಯ ಸ್ವಾಮಿ ಹಾಗೂ ತಂತುಕೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸಮಸ್ತ ಜನರ ಸುಖ-ಸಂತೋಷಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಸಚಿವರು ಗಾಣಗಾಪುರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಸಿದ್ಧಪಡಿಸಲಾದ ಮಾಸ್ಟರ್ ಪ್ಲಾನ್ ಅನ್ನು ಪರಿಶೀಲಿಸಿದರು.  ಸ್ಥಳೀಯ ಮುಖಂಡರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ, ಬಜೆಟ್‌ನಲ್ಲಿ ವಿಶೇಷ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕ್ಷೇತ್ರಕ್ಕೆ ಬರುವ ಸಾವಿರಾರು ಭಕ್ತರಿಗೆ ಇನ್ನಷ್ಟು ಸುಸಜ್ಜಿತ ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಸಚಿವರು ಹೇಳಿದರು. ಅನ್ನದಾಸೋಹ ಭವನ ನಿರ್ಮಾಣಕ್ಕೆ ಉದಾರವಾಗಿ ಸಹಕರಿಸಿದ ದಾನಿಗಳಾದ ಶ್ರೀನಿವಾಸ ಕೋಣೆರ ದಂಪತಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಶಾಸಕ ಎಂ.ವೈ. ಪಾಟೀಲ್ ಮಾತನಾಡಿ, ಕ್ಷೇತ್ರದ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ವಿವರಿಸಿ, ವರ್ಷಂಪ್ರತಿ ಕೋಟಿಗಿಂತಲೂ ಹೆಚ್ಚು ಸಂಖ್ಯೆಯಲ್ಲಿ ದರ್ಶನಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಸಮಗ್ರ ಸೌಲಭ್ಯ ಒದಗಿಸಲು ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರದ ಗಮನಕ್ಕೆ ತರಲಾಗುತ್ತಿದೆ ಎಂದರು.

ಅನ್ನದಾಸೋಹ ಭವನ ನಿರ್ಮಾಣಕ್ಕಾಗಿ ಒಟ್ಟು 2 ಕೋಟಿ ರೂ. ದೇಣಿಗೆ ನೀಡಿದ ಶ್ರೀನಿವಾಸ ಕೋಣೆರ ದಂಪತಿಗಳ ಸೇವಾಭಾವವನ್ನು ಶ್ಲಾಘಿಸಿ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.

ಸಚಿವರು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸ್ಥಳೀಯ ಮುಖಂಡರು ಮತ್ತು ಉಸ್ತುವಾರಿ ಸಚಿವರ ಸಮಾಲೋಚನೆಯೊಂದಿಗೆ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಹಂಚಿಕೆ ಮಾಡುವ ಬಗ್ಗೆ ಪ್ರಯತ್ನಿಸಲಾಗುವುದು. ಮುಂದಿನ ದಿನಗಳಲ್ಲಿ ಭಕ್ತರಿಗೆ ಇನ್ನಷ್ಟು ಸುಸಜ್ಜಿತ ಮತ್ತು ಅನುಕೂಲಕರ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಭರವಸೆ ಕೊಟ್ಟರು.

ಈ ಸಂದರ್ಭದಲ್ಲಿ ಅಫಜಲಪುರದ ಶಾಸಕ ಎಂ.ವೈ. ಪಾಟೀಲ, ವಿಧಾನಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಕೆ.ಕೆ.ಆರ್.ಟಿ.ಸಿ ಅಧ್ಯಕ್ಷ ಅರುಣ್ ಕುಮಾರ್ ಪಾಟೀಲ್, ಕಲಬುರಗಿ ಜಿಲ್ಲಾಧಿಕಾರಿಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಗಾಣಗಾಪುರ: ಶ್ರೀ ಕ್ಷೇತ್ರ ಗಾಣಗಾಪುರ ಕರ್ನಾಟಕದ ಸುಪ್ರಸಿದ್ಡ ಧಾರ್ಮಿಕ ಕ್ಷೇತ್ರ. ಕಲಬುರಗಿ ಜಿಲ್ಲೆಯಲ್ಲಿದೆ. ದತ್ತಸಂಪ್ರದಾಯದ ಒಂದು ಪವಿತ್ರ ತೀರ್ಥಕ್ಷೇತ್ರವಿದು. ಭೀಮಾ- ಅಮರಜ ನದಿಗಳ ಸಂಗಮದ ಹತ್ತಿರ ಈ ಊರು ಇದ್ದು, ಪ್ರತಿನಿತ್ಯ ನೂರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ.

ಶ್ರೀಗುರುಚರಿತ್ರೆ ಎಂಬ ಗ್ರಂಥದಲ್ಲಿ ಇದನ್ನು ಗಾಣಗಾಪುರ, ಗಾಣಗಾಭವನ, ಗಂಧರ್ವಭವನ, ಗಂಧರ್ವಪುರ ಎಂಬ ಹೆಸರುಗಳಿಂದ ಉಲ್ಲೇಖಿಸಲಾಗಿದೆ. ದತ್ತಾವತಾರಿ ಎಂದು ಪ್ರಸಿದ್ಧಿಹೊಂದಿರುವ ಶ್ರೀನರಸಿಂಹ ಸರಸ್ವತಿಯವರು ವಾಡಿ ಎಂಬ ಊರಿನಿಂದ ಇಲ್ಲಿಗೆ ಬಂದು ಸುಮಾರು 23 ವರ್ಷ ನೆಲೆಸಿದ್ದರು. ಈ ಅವಧಿಯಲ್ಲಿ ಇಲ್ಲಿ ದತ್ತ ಸಂಪ್ರದಾಯವನ್ನು ಅನುಸರಿಸುವವರ ಸಂಖ್ಯೆ ಹೆಚ್ಚಾಯಿತು ಎನ್ನುತ್ತದೆ ಇತಿಹಾಸ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular