HomeKarnatakaBIG NEWS: ರಾಜ್ಯದ ದೇವಾಲಯಗಳ ಅಭಿವೃದ್ಧಿ, ಅರ್ಚಕರಿಗೆ ಸೌಲಭ್ಯಕ್ಕೆ ಕಾಯ್ದೆ ತಿದ್ದುಪಡಿ

BIG NEWS: ರಾಜ್ಯದ ದೇವಾಲಯಗಳ ಅಭಿವೃದ್ಧಿ, ಅರ್ಚಕರಿಗೆ ಸೌಲಭ್ಯಕ್ಕೆ ಕಾಯ್ದೆ ತಿದ್ದುಪಡಿ

ಬೆಂಗಳೂರು: ಮುಜರಾಯಿ ಇಲಾಖೆ ಸಿ ವರ್ಗದ ದೇವಸ್ಥಾನಗಳ ಅಭಿವೃದ್ಧಿ, ಅರ್ಚಕರ ಕ್ಷೇಮಾಭಿವೃದ್ಧಿಗೆ ಹೆಚ್ಚಿನ ಅನುದಾನ ಖರ್ಚು ಮಾಡಲು ಸಾಮಾನ್ಯ ಸಂಗ್ರಹಣಾ ನಿಧಿ ಮೊತ್ತ ಹೆಚ್ಚಳ ಮಾಡಲು ಕಾಯ್ದೆಗೆ ತಿದ್ದುಪಡಿ ತರಲು ಉದ್ದೇಶಿಸಲಾಗಿದೆ.

ಬೆಂಗಳೂರಿನ ಚಾಮರಾಜಪೇಟೆಯ ಶ್ರೀ ರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕಾಯ್ದೆಗೆ ರಾಜ್ಯಪಾಲರ ಅನುಮೋದನೆ ಸಿಗಬೇಕಿದೆ. ಅನುಮೋದನೆಯಾದ ನಂತರ ಹೆಚ್ಚಾಗಿ ಸಂಗ್ರಹವಾಗುವ ನಿಧಿಯಲ್ಲಿ ಪ್ರತಿ ವರ್ಷ ನೂರು ದೇವಾಲಯಗಳಂತೆ ಸಿ ವರ್ಗದ ದೇವಾಲಯಗಳ ಜೀರ್ಣೋದ್ಧಾರ, ವಿದ್ಯಾರ್ಥಿ ವೇತನ, ಮರಣ ಉಪದಾನ, ಅರ್ಚಕರಿಗೆ ವಸತಿ ಸೌಲಭ್ಯ ಕಲ್ಪಿಸಲು ಬಳಸಲಾಗುತ್ತದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇವಾಲಯಗಳ ಅಭಿವೃದ್ಧಿಗೆ, ಅರ್ಚಕರ ಕ್ಷೇಮಾಭಿವೃದ್ಧಿಗೆ ನಿಧಿ ವಿನಿಯೋಗ ಮಾಡಲು ಸರ್ಕಾರ ತೀರ್ಮಾನಿಸಿದೆ. ಅರ್ಚಕರ ವಿವಿಧ ಬೇಡಿಕೆಗಳನ್ನು ಸರ್ಕಾರದ ಹಂತದಲ್ಲಿ ಚರ್ಚಿಸಿ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular