HomeIndiaಪ್ರಧಾನಿ ಮೋದಿ ಸಮ್ಮುಖದಲ್ಲಿ ಮಹಾರಾಷ್ಟ್ರ ಸಿಎಂ ಆಗಿ ಫಡ್ನವಿಸ್, ಡಿಸಿಎಂಗಳಾಗಿ ಏಕನಾಥ್ ಶಿಂಧೆ, ಅಜಿತ್ ಪವಾರ್...

ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಹಾರಾಷ್ಟ್ರ ಸಿಎಂ ಆಗಿ ಫಡ್ನವಿಸ್, ಡಿಸಿಎಂಗಳಾಗಿ ಏಕನಾಥ್ ಶಿಂಧೆ, ಅಜಿತ್ ಪವಾರ್ ಪ್ರಮಾಣವಚನ

ಮುಂಬೈ: ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದ ಅದ್ಧೂರಿ ಸಮಾರಂಭದಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಪ್ರಮಾಣ ವಚನ ಬೋಧಿಸಿದರು.

ಮೂರನೇ ಬಾರಿಗೆ ಸಿಎಂ ಸ್ಥಾನ ಅಲಂಕರಿಸಿದ ಫಡ್ನವೀಸ್ ಇಬ್ಬರು ಉಪಮುಖ್ಯಮಂತ್ರಿಗಳೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಅಜಿತ್ ಪವಾರ್ ಮತ್ತು ಶಿವಸೇನೆ ಅಧ್ಯಕ್ಷ ಏಕನಾಥ್ ಶಿಂಧೆ ಕೂಡ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಕೇಂದ್ರ ಸಚಿವರು, ಎನ್.ಡಿ.ಎ. ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನವೆಂಬರ್ 20 ರ ರಾಜ್ಯ ವಿಧಾನಸಭಾ ಚುನಾವಣೆ ಮತ್ತು ನವೆಂಬರ್ 23 ರಂದು ಫಲಿತಾಂಶದ ನಂತರ ಎರಡು ವಾರಗಳ ತೀವ್ರ ಮಾತುಕತೆಗಳ ನಂತರ ಹೊಸ ಸರ್ಕಾರ ರಚನೆಯಾಗಿದೆ. ನಾಗ್ಪುರ ನೈಋತ್ಯ ಕ್ಷೇತ್ರವನ್ನು ಪ್ರತಿನಿಧಿಸುವ 54 ವರ್ಷದ ಫಡ್ನವಿಸ್ ಅವರು ಮುಖ್ಯಮಂತ್ರಿಯಾಗಿದ್ದಾರೆ.

288 ಸದಸ್ಯ ಬಲದ ಸದನದಲ್ಲಿ 132 ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ. ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಎನ್‌ಸಿಪಿಯೊಂದಿಗೆ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟವು 230 ಸ್ಥಾನಗಳ ಬಹುಮತವನ್ನು ಹೊಂದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular