ಚಿಕ್ಕಮಗಳೂರು: ಚಿಕ್ಕಮಗಳೂರಿನ ಪ್ರಸಿದ್ಧ ದೇವಿರಮ್ಮ ದೇವಾಲಯದ ಬೆಟ್ಟದ ಮಾರ್ಗದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿರುವ ದೇವಿರಮ್ಮ ಬೆಟ್ಟದ ದಾರಿ ಸ್ವಚ್ಛತೆ ಕಾರ್ಯ ಮಾಡುತ್ತಿದ್ದ ವೇಳೆ ಬೆಟ್ಟದ ಮಾರ್ಗದಲ್ಲಿ ಅಸ್ತಿಪಂಜರ ಪತ್ತೆಯಾಗಿದೆ. ಈ ಬಗ್ಗೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಯುಡಿಆರ್ ದಾಖಲಾಗಿದ್ದು, ಪೊಲೀಸರು ಅಸ್ಥಿಪಂಜರ ಬಗ್ಗೆ ತನಿಖೆ ನಡೆಸಿದ್ದಾರೆ.
ಪ್ರತಿ ವರ್ಷ ದೀಪಾವಳಿ ಹಬ್ಬದ ಮೊದಲ ದಿನದಂದು ಲಕ್ಷಾಅಂತರ ಭಕ್ತರು ದೇವಿರಮ್ಮ ಬೆಟ್ಟ ಹತ್ತಿ ದೇವಿರಮ್ಮ ದರ್ಶನವನ್ನು ಪಡೆಯುತ್ತಾರೆ. ಇದೀಗ ದೀಪಾವಳಿ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಟ್ಟದ ದಾರಿ ಸ್ವಚ್ಛಗೊಳಿಸಲಾಗುತ್ತಿದ್ದು, ಈ ವೇಳೆ ಅಸ್ಥಿಪಂಜರವೊಂದು ಪತ್ತೆಯಾಗಿದೆ.