ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಗೋಕರ್ಣದಲ್ಲಿ ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಮಹಾಬಲೇಶ್ವರ ಮಂದಿರ ಮತ್ತು ಆತ್ಮಲಿಂಗ ದರ್ಶನಕ್ಕೆ ಭಾನುವಾರ ಆಗಮಿಸಿದ್ದ ಭಕ್ತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಗೋವಾ ಮೂಲದ ರತ್ನಾಕರ ಬೋಮಕರ(71) ಮೃತಪಟ್ಟವರು. ದೇವರ ದರ್ಶನ ಪಡೆದು ಹೊರಬಂದ ನಂತರ ರತ್ನಾಕರ ಅವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಪೊಲೀಸ್ ವಾಹನದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರತ್ನಾಕರ ಮೃತಪಟ್ಟಿದ್ದಾರೆ ಎನ್ನಲಾಗಿದೆ.

