HomeIndiaಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ದರ್ಶನ ಅವಧಿ ವಿಸ್ತರಣೆ

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ದರ್ಶನ ಅವಧಿ ವಿಸ್ತರಣೆ

ಪಟ್ಟಣಂತಿಟ್ಟ: ಕೇರಳದ ಪ್ರಸಿದ್ಧ ಧಾರ್ಮಿಕ ಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಭಾರಿ ಸಂಖ್ಯೆಯ ಭಕ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದರ್ಶನದ ಅವಧಿಯನ್ನು ಒಂದು ಗಂಟೆ ವಿಸ್ತರಿಸಲಾಗಿದೆ.

ದರ್ಶನದ ದ್ವಿತೀಯ ಚರಣದಲ್ಲಿ ಒಂದು ಗಂಟೆ ಮುಂಚಿತವಾಗಿ ಬಾಗಿಲು ತೆರೆಯಲಾಗುವುದು. 4 ಗಂಟೆಯ ಬದಲಾಗಿ 3 ಗಂಟೆಯಿಂದಲೇ ದೇಗುಲದ ಬಾಗಿಲು ತೆರೆದು ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನವೆಂಬರ್ 16ರಿಂದ ಮಕರವಿಳಕ್ಕು ಪ್ರಯುಕ್ತ ದರ್ಶನ ಆರಂಭವಾಗಿದ್ದು, ಪ್ರತಿದಿನ ಸರಾಸರಿ 1.20 ಲಕ್ಷ ಜನ ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಹೀಗಾಗಿ ದರ್ಶನದ ಅವಧಿಯನ್ನು ಒಂದು ಗಂಟೆ ಹೆಚ್ಚಳ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular