ಭಕ್ತರ ಗಮನಕ್ಕೆ: ಚಂದ್ರಗ್ರಹಣ ಹಿನ್ನೆಲೆ ಕುಕ್ಕೆ ದೇವರ ದರ್ಶನ ಸಮಯ ಬದಲಾವಣೆ

ಮಂಗಳೂರು: ಅಕ್ಟೋಬರ್ 28ರಂದು ಶನಿವಾರ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಚಂದ್ರ ಗ್ರಹಣ ನಿಮಿತ್ತ ಅಂದು ರಾತ್ರಿ ನಡೆಯುವ ಮಹಾಪೂಜೆಯನ್ನು ಸಂಜೆ 6.30ಕ್ಕೆ ನಡೆಸಲಿದ್ದು, ನಂತರ ಭಕ್ತರಿಗೆ ದೇವರ ದರ್ಶನ ಇರುವುದಿಲ್ಲ. ಗ್ರಹಣ ಹಿನ್ನಲೆ ಶನಿವಾರ ಸಂಜೆ ಆಶ್ಲೇಷ ಬಲಿ ಸೇವೆ ಇರುವುದಿಲ್ಲ. ರಾತ್ರಿ ಪ್ರಸಾದ ಭೋಜನ ಕೂಡ ಇರುವುದಿಲ್ಲ ಎಂದು ಹೇಳಲಾಗಿದೆ.

ಗ್ರಹಣದ ಸಮಯದಲ್ಲಿ ದೇವಾಲಯಗಳನ್ನು ಬಂದ್ ಮಾಡಲಾಗುವುದು. ನಾಡಿನ ದೇವಾಲಯಗಳಲ್ಲಿಯೂ ಗ್ರಹಣದ ವೇಳೆ ದರ್ಶನ ಇರುವುದಿಲ್ಲ. ಗ್ರಹಣದ ನಂತರ ಪೂಜೆ ಸಲ್ಲಿಸಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read