ಭಕ್ತರೇ ಗಮನಿಸಿ : ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳ ಪ್ರವೇಶ ನಿರ್ಬಂಧ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟಕ್ಕೆ ಅಕ್ಟೋಬರ್ 11ರ ಸಂಜೆ 6 ಗಂಟೆಯಿಂದ ಅ15 ಸಂಜೆ 7 ಗಂಟೆಯವರೆಗೆ ದ್ವಿಚಕ್ರ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ.

ಮಹಾಲಯ ಅಮಾವಾಸ್ಯೆ ಜಾತ್ರೆ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಬೈಕ್ ಗಳ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶ ಹೊರಡಿಸಿದ್ದಾರೆ.
ರಸ್ತೆಯಲ್ಲಿ ಬಹಳ ತಿರುವುಗಳಿದ್ದು, ವಾಹನಗಳ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read