
ಶ್ರೀ ದೇವಳದಲ್ಲಿ 2023-24ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವ ಸಂಬಂಧ ದಿನಾಂಕ 09/12/2023ರ ಶನಿವಾರ “ಮೂಲಮೃತಿಕಾ” ಪ್ರಸಾದ ತೆಗೆಯುವ ಕಾರ್ಯಕ್ರಮ ಇರುತ್ತದೆ. ಆದ್ದರಿಂದ ಭಕ್ತಾದಿಗಳಿಗೆ ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶವಿರುವುದಿಲ್ಲ. ಭಕ್ತಾದಿಗಳು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.
ಕ್ಷೇತ್ರದ ಮೂಲಸ್ಥಾನವಾದ ಗರ್ಭಗುಡಿಯಿಂದ ಈ ಮೂಲಮೃತಿಕಾ ಪ್ರಸಾದವನ್ನು ತೆಗೆದು ಭಕ್ತರಿಗೆ ನೀಡಲಾಗುತ್ತದೆ. ಈ ಪ್ರಸಾದವು ರೋಗ ನಿರೋಧಕ ಶಕ್ತಿ ಹೊಂದಿದೆ ಎಂಬುದು ಭಕ್ತರ ನಂಬಿಕೆಯಾಗಿದೆ.
ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರುವ ಈ ದೇವಾಲಯ ಬಹಳ ಪ್ರಸಿದ್ದಿ ಹೊಂದಿದೆ.

