HomeKarnatakaBIG NEWS: ವಿದ್ಯಾರ್ಥಿಗಳ ಅಂಕಪಟ್ಟಿ, ಪ್ರಮಾಣ ಪತ್ರ, ಶೈಕ್ಷಣಿಕ ದಾಖಲೆ ಡಿಜಿ ಲಾಕರ್ ನಲ್ಲಿ ಸಂಗ್ರಹ...

BIG NEWS: ವಿದ್ಯಾರ್ಥಿಗಳ ಅಂಕಪಟ್ಟಿ, ಪ್ರಮಾಣ ಪತ್ರ, ಶೈಕ್ಷಣಿಕ ದಾಖಲೆ ಡಿಜಿ ಲಾಕರ್ ನಲ್ಲಿ ಸಂಗ್ರಹ ಕಡ್ಡಾಯ; ಸರ್ಕಾರ ಆದೇಶ

ಬೆಂಗಳೂರು: ಪ್ರಸಕ್ತ 2023ನೇ ಶೈಕ್ಷಣಿಕ ಸಾಲಿನಿಂದ ಪದವಿ, ಸ್ನಾತಕೋತ್ತರ ಪದವಿ ಅಂಕಪಟ್ಟಿಗಳು, ವಿದ್ಯಾರ್ಥಿಗಳ ಪ್ರಮಾಣ ಪತ್ರ, ಶೈಕ್ಷಣಿಕ ದಾಖಲೆಗಳನ್ನು ನಾಡ್(NAD)  ಡಿಜಿ ಲಾಕರ್ ನಲ್ಲಿ ಡಿಜಿಟಲ್ ರೂಪದಲ್ಲಿ ಕಡ್ಡಾಯವಾಗಿ ಸಂಗ್ರಹಿಸಲು ಸರ್ಕಾರ ಆದೇಶಿಸಿದೆ.

ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆಗಳು, ವಿಶ್ವವಿದ್ಯಾಲಯಗಳು, ಶೈಕ್ಷಣಿಕ ಸಂಸ್ಥೆಗಳು ಪ್ರಸಕ್ತ ಸಾಲಿನಿಂದ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಕಡ್ಡಾಯವಾಗಿ ಸಂಗ್ರಹಿಸಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಕಲಿ ಅಂಕಪಟ್ಟಿ ಹಾವಳಿ ತಡೆದು ರಾಜ್ಯದ ಉನ್ನತ ಶಿಕ್ಷಣ ವಿದ್ಯಾರ್ಥಿಗಳು ಅಕಾಡೆಮಿ ಬ್ಯಾಂಕ್ ಆಫ್ ಕ್ರೆಡಿಟ್ ನಲ್ಲಿ ನೋಂದಾಯಿಸಿಕೊಳ್ಳಲು, ನೇಮಕಾತಿ ಸಂದರ್ಭದಲ್ಲಿ ಎನ್ಎಡಿ ಡಿಜಿ ಲಾಕರ್ ನಲ್ಲಿ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳನ್ನು ಕಡ್ಡಾಯಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಬಜೆಟ್ ನಲ್ಲಿ ಘೋಷಿಸಿತ್ತು.

ಅಂತೆಯೇ ದಾಖಲೆಗಳನ್ನು ಉದ್ಯೋಗ ನೇಮಕಾತಿ ಸಂಸ್ಥೆಗಳು ನೇಮಕಾತಿ ಸಮಯದಲ್ಲಿ ದೃಢೀಕೃತವೆಂದು ಪರಿಗಣಿಸಲು ಸರ್ಕಾರ ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular