ಒಂದೇ ರನ್ ವೇ ನಲ್ಲಿ ಏರ್ ಇಂಡಿಯಾ, ಇಂಡಿಗೋ ವಿಮಾನ ಟೇಕಾಫ್, ಲ್ಯಾಂಡಿಂಗ್: ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ

ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಬಹುದಾಗಿದ್ದ ಭಾರಿ ವಿಮಾನ ಅಪಘಾತವೊಂದು ಸ್ವಲ್ಪದರಲ್ಲೇ ತಪ್ಪಿದೆ.

ವಾಯು ಸಂಚಾರ ನಿಯಂತ್ರಣ(ಎಟಿಸಿ) ಸಿಬ್ಬಂದಿ ವಿರುದ್ಧ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ಶೀಘ್ರ ಕ್ರಮ ಕೈಗೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏರ್ ಇಂಡಿಯಾ ವಿಮಾನವು ಇನ್ನೂ ಟೇಕ್ ಆಫ್ ಪ್ರಕ್ರಿಯೆಯಲ್ಲಿದ್ದಾಗ ಒಳಬರುವ ಇಂಡಿಗೋ ವಿಮಾನವು ರನ್‌ವೇ 27 ರಲ್ಲಿ ಇಳಿಯಲು ಪ್ರಯತ್ನಿಸಿದಾಗ ಘಟನೆ ನಡೆದಿದೆ.

ಇಂದೋರ್‌ನ ದೇವಿ ಅಹಲ್ಯಾಬಾಯಿ ಹೋಳ್ಕರ್ ವಿಮಾನ ನಿಲ್ದಾಣದಿಂದ ಇಂಡಿಗೋ ಫ್ಲೈಟ್ 5053 ಆಗಮಿಸಿದ್ದು, ಅದೇ ವೇಳೆ ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯಾ ಫ್ಲೈಟ್ 657 ಹೊರಟಿತ್ತು. ಶನಿವಾರ ಮುಂಜಾನೆ ಘಟನೆ ಸಂಭವಿಸಿದೆ.

ಇಂಡಿಗೋ ವಿಮಾನ ನೆಲಕ್ಕೆ ಹತ್ತಿರವಾಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಮಾಡುವಲ್ಲಿ ಯಶಸ್ವಿಯಾಗಿದೆ. ಸ್ವಲ್ಪದರಲ್ಲಿಯೇ ಭಾರಿ ಅನಾಹುತ ತಪ್ಪಿದೆ. ವಿಡಿಯೋ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read