ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರ ನೇರ ಚರ್ಚೆಗೆ ಬನ್ನಿ : ಪ್ರಧಾನಿ ಮೋದಿಗೆ ‘CM ಸಿದ್ದರಾಮಯ್ಯ’ ಸವಾಲ್..!

ಬೆಂಗಳೂರು : ಪ್ರಧಾನಿ ಮೋದಿ ಅವರೇ, ನಿಮ್ಮ ಪಕ್ಷದ ಖಜಾನೆಗೆ ಸಂದಾಯವಾಗಿರುವ ಚುನಾವಣಾ ಬಾಂಡ್ ಗಳ ಹಿಂದಿನ ಕೊಡುಗೈ ದಾನಿಗಳು ಯಾರು? ಅವರು ಕೊಟ್ಟದ್ದೆಷ್ಟು? ಅದಕ್ಕಾಗಿ ಅವರು ಪಡೆದದ್ದು ಎಷ್ಟು? ಎನ್ನುವುದು ಇಂದು ದೇಶದ ಜನರ ಕಣ್ಣಮುಂದಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ನಿಮ್ಮ ಹನ್ನೊಂದು ವರ್ಷಗಳ ಅವಧಿಯಲ್ಲಿ ಬ್ಯಾಂಕ್ ಲೂಟಿಗೈದವರು ದೇಶ ಬಿಟ್ಟು ಓಡಿಹೋಗಲು ದಾರಿ ಮಾಡಿಕೊಟ್ಟವರು ಯಾರು? ಅದಾನಿ-ಅಂಬಾನಿ ಅವರ ಸಂಪತ್ತು ಎಷ್ಟು ಪಟ್ಟು ಹೆಚ್ಚಾಯಿತು? ಬಡವರ ಗಳಿಕೆ ಎಷ್ಟು ಪಟ್ಟು ಕಡಿಮೆಯಾಯಿತು? ನೀವು ಭ್ರಷ್ಟಾಚಾರದ ಬಗ್ಗೆ ಚರ್ಚೆ ಪ್ರಾರಂಭಿಸಿರುವುದನ್ನು ನೋಡಿ ಸಂತೋಷವಾಯಿತು. ನನ್ನ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿ ಕುಣಿದಾಡುತ್ತಿರುವ ಪಾತ್ರಧಾರಿಗಳನ್ನಷ್ಟೇ ರಾಜ್ಯದ ಜನ ನೋಡಿದ್ದಾರೆ. ಈಗ ಇದರ ಹಿಂದಿರುವ ಸೂತ್ರಧಾರಿ ಯಾರು ಎನ್ನುವುದು ಕೂಡಾ ಜನರಿಗೆ ಗೊತ್ತಾಗಲಿ. ಮೋದಿಯವರೇ, ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆ ಮಾಡಲು ನೀವು ಸಿದ್ಧ ಇದ್ದರೆ ನಾನು ಸದಾ ಸಿದ್ಧ.

ಪ್ರಧಾನಿ ಮೋದಿ ಅವರೇ, ಕಳೆದ ಹನ್ನೊಂದು ವರ್ಷಗಳಲ್ಲಿ ನಿರಂತರವಾಗಿ ನಿಮ್ಮ ಕಾರ್ಯಾಲಯದ ವಾಷಿಂಗ್ ಮೆಷಿನ್ ಕೆಲಸ ಮಾಡುತ್ತಿರುವುದನ್ನು ದೇಶ ಗಮನಿಸುತ್ತಿದೆ. ನಿಮ್ಮಿಂದಲೇ ಭ್ರಷ್ಟಾಚಾರದ ಆರೋಪಕ್ಕೊಳಗಾಗಿರುವ ವಿರೋಧ ಪಕ್ಷಗಳ ನಾಯಕರನ್ನೆಲ್ಲಾ ವಾಷಿಂಗ್ ಮೆಷಿನ್ ನಲ್ಲಿ ಹಾಕಿ ಪರಮ ಪ್ರಾಮಾಣಿಕರನ್ನಾಗಿ ಮಾಡುತ್ತಿರುವ ನಿಮ್ಮ ಚಾಕಚಕ್ಯತೆಗೆ ಶಹಭಾಸ್ ಅನ್ನಲೇ ಬೇಕು. ಅಧಿಕೃತ ಮಾಹಿತಿಯ ಪ್ರಕಾರವೇ 2014ರಿಂದ ಇಲ್ಲಿಯ ವರೆಗೆ ಭ್ರಷ್ಟಾಚಾರದ ಆರೋಪ ಹೊತ್ತಿರುವ 25 ವಿರೋಧ ಪಕ್ಷದ ನಾಯಕರು
ಸೇರಿದ್ದಾರೆ. ಇವರಲ್ಲಿ 23 ನಾಯಕರನ್ನು ಭ್ರಷ್ಟಾಚಾರದ ಆರೋಪಗಳಿಂದ ಕೇಂದ್ರ ತನಿಖಾ ಸಂಸ್ಥೆಗಳು ಮುಕ್ತಗೊಳಿಸಿವೆ. ಹಿಮಂತಾ ಶರ್ಮಾ, ಸುವೇಂದು ಅಧಿಕಾರಿ, ಹೆಚ್.ಡಿ.ಕುಮಾರಸ್ವಾಮಿ, ಅಜಿತ್ ಪವಾರ್, ಅಶೋಕ್ ಚವ್ಹಾಣ್, ನಾರಾಯಣ ರಾಣೆ, ಪ್ರತಾಪ್ ಸರ್ನಾಯಕ್ ಅವರಿಂದ ಹಿಡಿದು ಇತ್ತೀಚಿನ ಏಡ್ಸ್ ಟ್ರ್ಯಾಪ್ ಗಿರಾಕಿ ಮುನಿರತ್ನ ವರೆಗೆ ಎಷ್ಟೊಂದು ಭ್ರಷ್ಟರನ್ನು ವಾಷಿಂಗ್ ಮೆಷಿನ್ ನಲ್ಲಿ ತೊಳೆದು ನೀವು ಕ್ಲೀನ್ ಮಾಡಿಲ್ಲ? ಇವೆಲ್ಲ ಕೇವಲ ಧರ್ಮಾರ್ಥ ಸೇವೆಯೇ ಪ್ರಧಾನಿಗಳೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

https://twitter.com/siddaramaiah/status/1838985309821747592

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read