ಬಿಜೆಪಿಗೆ ಮುಜುಗರ ತಂದ ಮಾಡಾಳ್ ಪ್ರಕರಣ: ಡಾ. ಧನಂಜಯ ಸರ್ಜಿಗೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್…?

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಲೋಕಾಯುಕ್ತ ಪ್ರಕರಣದಿಂದ ಮುಜುಗರಕ್ಕೀಡಾದ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ.

ಚನ್ನಗಿರಿ ಕ್ಷೇತ್ರದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದಲ್ಲಿ ಅವರ ಪುತ್ರ ಮಲ್ಲಿಕಾರ್ಜುನ್, ಹೆಚ್.ಎಸ್. ಶಿವಕುಮಾರ್ ಸೇರಿದಂತೆ ಹಲವರು ಆಕಾಂಕ್ಷಿಗಳಾಗಿದ್ದಾರೆ. ಆದರೆ, ಲೋಕಾಯುಕ್ತ ಪ್ರಕರಣ ಬಿಜೆಪಿಯಲ್ಲಿ ಹೊಸ ಬದಲಾವಣೆಗೆ ದಾರಿ ಮಾಡಿಕೊಟ್ಟಿದೆ. ಶಿವಮೊಗ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಚನ್ನಗಿರಿ ಮೂಲದ ಡಾ. ಧನಂಜಯ ಸರ್ಜಿ ಅವರಿಗೆ ಟಿಕೆಟ್ ನೀಡುವ ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.

ಚನ್ನಗಿರಿ ತಾಲೂಕಿನ ಗೊಪ್ಪೇನಹಳ್ಳಿಯ ಸರ್ಜಿ ಕುಟುಂಬದ ಡಾ. ಧನಂಜಯ ಸರ್ಜಿ ಅವರು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಜನಾನುರಾಗಿ ವೈದ್ಯರಾಗಿದ್ದಾರೆ. ಆರ್.ಎಸ್.ಎಸ್. ಸಕ್ರಿಯ ಕಾರ್ಯಕರ್ತರಾಗಿರುವ ಅವರು ಬಿಜೆಪಿ ಸೇರಿ ಸಂಘಟನೆಯಲ್ಲಿ ತೊಡಗಿದ್ದಾರೆ.

ಶಿವಮೊಗ್ಗ ಅಥವಾ ಚನ್ನಗಿರಿಯಲ್ಲಿ ಬದಲಿ ಅಭ್ಯರ್ಥಿ ಆಯ್ಕೆ ಮಾಡಿದಲ್ಲಿ ತಮಗೆ ಅವಕಾಶ ನೀಡಬೇಕೆಂದು ಧನಂಜಯ ಸರ್ಜಿ ಮನವಿ ಮಾಡಿದ್ದು, ಅವರಿಗೆ ಯಡಿಯೂರಪ್ಪ ಕುಟುಂಬದ ಬೆಂಬಲ ಇದೆ, ಲೋಕಾಯುಕ್ತ ಪ್ರಕರಣದಿಂದ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಟಿಕೆಟ್ ಕೈತಪ್ಪಿದಲ್ಲಿ ಧನಂಜಯ ಸರ್ಜಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ. ಚುನಾವಣೆ ಸಂದರ್ಭದಲ್ಲಿ ನಡೆದ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣ ಬಿಜೆಪಿಗೆ ಮುಜುಗರ ತಂದಿದ್ದು, ಹೀಗಾಗಿ ಕ್ಲೀನ್ ಇಮೇಜ್ ಹೊಂದಿರುವ ವ್ಯಕ್ತಿಗೆ ಮಣೆ ಹಾಕಲು ಪಕ್ಷದ ನಾಯಕರು ಚರ್ಚೆ ನಡೆಸಿದ್ದು, ಧನಂಜಯ ಸರ್ಜಿ ಅವರನ್ನು ಪರಿಗಣಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read