ಧಾರವಾಡದಲ್ಲಿ ಪೊಲೀಸರಿಂದ ಏರಿಯಾ ಡಾಮಿನೇಷನ್: 243 ಮಂದಿ ವಿರುದ್ಧ ಕ್ರಮ

ಧಾರವಾಡ: ಧಾರವಾಡದಲ್ಲಿ ಪೊಲೀಸರಿಂದ ಏರಿಯಾ ಡಾಮಿನೇಷನ್ ನಡೆಸಲಾಗಿದೆ. ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಒಟ್ಟು 243 ಜನರ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ಖಾಲಿ ಜಾಗ ಮತ್ತು ರಸ್ತೆ ಪಕ್ಕದಲ್ಲಿ ಮದ್ಯಪಾನ ಮಾಡುತ್ತಿದ್ದ 61 ಜನರ ವಿರುದ್ಧ ಕ್ರಮ ಜರುಗಿಸಲಾಗಿದ್ದು, 50 ರೌಡಿಶೀಟರ್ ಗಳು ಸೇರಿ ಒಟ್ಟು 170 ಜನರನ್ನು ವಶಕ್ಕೆ ಪಡೆಯಲಾಗಿದೆ. ಕೆಪಿ ಕಾಯ್ದೆಯಡಿ ಕೇಸು ದಾಖಲಿಸಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುತ್ತಿದ್ದ 31 ಜನರ ವಿರುದ್ಧ ಕೇಸು ದಾಖಲಿಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿದ 38 ಜನರ ವಿರುದ್ಧ ಎಂವಿ ಕಾಯ್ದೆಯಡಿ ಕೇಸ್ ದಾಖಕಲಾಗಿದೆ ಎಂದು ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read