HomeLive Newsಬಸ್ ಡಿಪೋದಲ್ಲಿಯೇ ಹನುಮಾನ್ ಗುಡಿ ನಿರ್ಮಿಸಿದ ಮುಸ್ಲಿಂ ವ್ಯಕ್ತಿ!

ಬಸ್ ಡಿಪೋದಲ್ಲಿಯೇ ಹನುಮಾನ್ ಗುಡಿ ನಿರ್ಮಿಸಿದ ಮುಸ್ಲಿಂ ವ್ಯಕ್ತಿ!

ಧಾರವಾಡ: ಮುಸ್ಲಿಂ ಕಾನ್ಸ್ ಟೇಬಲ್ ಓರ್ವ ಎನ್​​ಡಬ್ಲ್ಯುಕೆಎಸ್​ಆರ್​ಟಿಸಿ ಭದ್ರತಾ ವಿಭಾಗದ ಧಾರವಾಡ ಬಸ್ ಡಿಪೋ ಆವರಣದಲ್ಲಿ ಹನುಮಾನ್ ಗುಡಿ ನಿರ್ಮಿಸಿ ಸೌಹಾರ್ದತೆ ಮೆರೆದಿರುವ ಘಟನೆ ನಡೆದಿದೆ.

ಸ್ವಂತ ಹಣ, ಸಹೋದ್ಯೋಗಿಗಳ ನೆರವಿನಿಂದ ಆಂಜನೇಯನ ಗುಡಿ ನಿರ್ಮಿಸಿದ್ದು, ಇತರ ಧರ್ಮಗಳ ಬಗ್ಗೆ ಗೌರವ ಮತ್ತು ಸಹೋದರತ್ವದ ಸಂದೇಶ ಸಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಾಲ್ ಸಾಬ್ ರಸಲ್​ಸಾಬ್ ಬೂದಿಹಾಳ (60) ತಮ್ಮ ಸಮುದಾಯದ ಮುಖಂಡರು ಮತ್ತು ನಿಗಮದ ಉನ್ನತ ಅಧಿಕಾರಿಗಳ ವಿರೋಧದ ಹೊರತಾಗಿಯೂ ಹನುಮಾನ ಗುಡಿ ನಿರ್ಮಾಣ ಕೈಗೆತ್ತಿಕೊಂಡಿದ್ದರು. ಕಳೆದ ವರ್ಷ ಗುಡಿ ನಿರ್ಮಾಣ ಪೂರ್ಣಗೊಂಡಿದ್ದು, ಈಗ ಬೆಳಕಿಗೆ ಬಂದಿದೆ.

ಹನುಮಾನ ಗುಡಿ ಬಗ್ಗೆ ಲಾಲ್ ಸಾಬ್ ರಸಲ್​ಸಾಬ್ ಮಾತನಾಡಿದ್ದು, ಹೊಸ ಡಿಪೋದಲ್ಲಿ ಕರ್ತವ್ಯದಲ್ಲಿದ್ದಾಗ, ವಾಹನ ಪಾರ್ಕಿಂಗ್ ಸ್ಥಳದಲ್ಲಿ ವಿಗ್ರಹ ಬಿದ್ದಿರುವುದನ್ನು ನೋಡಿದೆ. ದೇವರ ಮೂರ್ತಿಯನ್ನು ಕೆಟ್ಟದಾಗಿ ನಡೆಸಿಕೊಂಡ ರೀತಿ ನನಗೆ ನೋವುಂಟು ಮಾಡಿತು ಮತ್ತು ಗುಡಿ ನಿರ್ಮಿಸಲು ನಿರ್ಧರಿಸಿದೆ. ಅನೇಕ ಜನರು ವಿರೋಧಿಸಿದರು. ಆದರೆ ನಾನು ಹಿಂದೆ ಸರಿಯಲಿಲ್ಲ. ಇದು ಕೇವಲ ಹನುಮಾನ ಗುಡಿಯಲ್ಲ, ಇದು ಇತರ ಧರ್ಮಗಳ ಕಡೆಗೆ ಸಹೋದರತ್ವ ಮತ್ತು ಗೌರವದ ಸಂಕೇತವಾಗಿದೆ ಎಂದು ಲಾಲ್ ಸಾಬ್ ರಸಲ್​ಸಾಬ್ ಬೂದಿಹಾಳ ತಿಳಿಸಿದ್ದಾರೆ.

ಗುಡಿ ನಿರ್ಮಾಣದ ಆರಂಭಿಕ ಹಂತದಲ್ಲಿ ಕೆಲವು ಉದ್ಯೋಗಿಗಳು ಕೈಜೋಡಿಸಿದ್ದರು. ಆದರೆ ವಿಜಿಲೆನ್ಸ್ ತಂಡದಿಂದ ಅಮಾನತುಗೊಳಿಸುವ ಬೆದರಿಕೆ ಬಂದ ನಂತರ ಅವರೆಲ್ಲ ಹಿಂದೆ ಸರಿದಿದ್ದರು ಎಂದು ಡಿಪೋದ ಒಬ್ಬರು ಉದ್ಯೋಗಿ ತಿಳಿಸಿರುವುದಾಗಿ ವರದಿಯಾಗಿದೆ. ಆದಾಗ್ಯೂ, ಲಾಲ್‌ಸಾಬ್ ಎಂದಿಗೂ ಹಿಂದೆ ಸರಿಯಲಿಲ್ಲ. ಅವರಿಗೆ ಅವರ ಸಮುದಾಯದವರಿಂದಲೇ ಬೆದರಿಕೆಗಳು ಬಂದಿದ್ದವು. ಆದರೆ ದೃಢನಿಶ್ಚಯದ ಬಲ ಮತ್ತು ಹನುಮಂತನ ಆಶೀರ್ವಾದವು ಅವರು ಗುರಿ ತಲುಪಲು ಸಹಾಯ ಮಾಡಿತು ಎಂದು ಉದ್ಯೋಗಿ ಹೇಳಿದ್ದಾರೆ.


ಲಾಲ್ ಸಾಬ್ ಒಬ್ಬ ನಿಷ್ಠಾವಂತ ವ್ಯಕ್ತಿ ಮತ್ತು ಅವರ ವಿರೋಧಿಗಳು ಗುಡಿ ನಿರ್ಮಾಣವನ್ನು ನಿಲ್ಲಿಸುವಲ್ಲಿ ವಿಫಲರಾದರು. ಒಂದು ಹಂತದ ನಂತರ, ಮುಸ್ಲಿಂ ಸಮುದಾಯದ ಬಹುಪಾಲು ಉದ್ಯೋಗಿಗಳೇ ಅವರನ್ನು ಬೆಂಬಲಿಸಿದರು ಎಂಬುದು ವಿಶೇಷ.

For Latest News Updates, Join Our Whatsapp Community🚩
RELATED ARTICLES

Most Popular