HomeKarnatakaಧಾರವಾಡ ಜಿಲ್ಲಾ ಕೋರ್ಟ್ ಗೆ ಮತ್ತೆ ಬಾಂಬ್ ಬೆದರಿಕೆ: ಒಂದೇ ವಾರದಲ್ಲಿ ಎರಡನೇ ಬಾರಿ ಘಟನೆ

ಧಾರವಾಡ ಜಿಲ್ಲಾ ಕೋರ್ಟ್ ಗೆ ಮತ್ತೆ ಬಾಂಬ್ ಬೆದರಿಕೆ: ಒಂದೇ ವಾರದಲ್ಲಿ ಎರಡನೇ ಬಾರಿ ಘಟನೆ

ಧಾರವಾಡ: ಧಾರವಾಡ ಜಿಲ್ಲಾ ನ್ಯಾಯಾಲಯಕೆ ಮತ್ತೆ ಬಾಂಬ್ ಬೆದರಿಕೆ ಹಾಕಲಾಗಿದೆ. ವಾರದಲ್ಲಿ ಎರಡನೇ ಬಾರಿಗೆ ಧಾರವಾಡ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ ಬಂದಿದೆ.

ಕೋರ್ಟ್‌ನ ಆಡಳಿತ ಕಚೇರಿಗೆ ಇ – ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಕೋರ್ಟ್ ಹಾಗೂ ಕೋರ್ಟ್ ಕಾಂಪ್ಲೆಕ್ಸ್‌ನಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಸಂದೇಶ ರವಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆದರಿಕೆ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಎಚ್ಚೆತ್ತುಕೊಂಡು ತಕ್ಷಣ ಶೋಧ ಕಾರ್ಯಾಚರಣೆ ಆರಂಭಿಸಿದರು. ಮುನ್ನೆಚ್ಚರಿಕಾ ಕ್ರಮವಾಗಿ ವಕೀಲರು, ನ್ಯಾಯಾಲಯದ ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಹೊರಗೆ ತೆರಳುವಂತೆ ಸೂಚಿಸಲಾಯಿತು. ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಜೂನ್ 19ರಂದು ಧಾರವಾಡ ಕೋರ್ಟ್‌ನ ಆಡಳಿತ ಕಚೇರಿಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. ಮಧ್ಯಾಹ್ನ 2 ಗಂಟೆಗೆ ನಿಮ್ಮ ನ್ಯಾಯಾಲಯದಲ್ಲಿ 23 ಸೈನೈಡ್ ವಾಯು ಗುಂಡುಗಳು ಸ್ಫೋಟಗೊಳ್ಳಲಿವೆ ಎಂದು ಇ-ಮೇಲ್‌ನಲ್ಲಿ ಬೆದರಿಕೆ ಹಾಕಲಾಗಿತ್ತು. ಇದರಿಂದಾಗಿ ಕೋರ್ಟ್ ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ಪರಿಶೀಲನೆ ನಡೆಸಿತ್ತು.

ಯಾವುದೇ ಸ್ಫೋಟಕಗಳು, ಅನುಮಾನಾಸ್ಪದ ವಸ್ತುಗಳು ಪತ್ತೆಯಾಗದ ಕಾರಣ ಇದೊಂದು ಹುಸಿಬಾಂಬ್ ಬೆದರಿಕೆ ಎಂದು ತಿಳಿದುಬಂದಿತ್ತು. ಇದೀಗ ಧಾರವಾಡ ಕೋರ್ಟ್ ಗೆ ಮತ್ತೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular