HomeLatest NewsBIG NEWS: ಕೃಷಿ ಕೆಲಸಕ್ಕೆ ಜಮೀನಿಗೆ ಹೋಗುವಾಗ ಘೋರ ದುರಂತ: ಟ್ರ್ಯಾಕ್ಟರ್ ಪಲ್ಟಿಯಾಗಿ ವ್ಯಕ್ತಿ ದುರ್ಮರಣ!

BIG NEWS: ಕೃಷಿ ಕೆಲಸಕ್ಕೆ ಜಮೀನಿಗೆ ಹೋಗುವಾಗ ಘೋರ ದುರಂತ: ಟ್ರ್ಯಾಕ್ಟರ್ ಪಲ್ಟಿಯಾಗಿ ವ್ಯಕ್ತಿ ದುರ್ಮರಣ!

ಧಾರವಾಡ: ಕೃಷಿ ಕೆಲಸಕ್ಕೆ ಜಮೀನಿಗೆ ಹೋಗುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಂಚಿನಾಳ-ದೇವನೂರ ಬಳಿ ನಡೆದಿದೆ.

ಶಿವಯ್ಯ ವಾಟ್ನಾಳಮಠ (29) ಮೃತ ದುರ್ದೈವಿ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಕುಂದಗೋಳದ ಶಿವಯ್ಯ ಹಾಗೂ ಇನ್ನಿಬ್ಬರು ಟ್ರ್ಯಾಕ್ಟರ್ ನಲ್ಲಿ ಬಿತ್ತನೆ ಕಾರ್ಯಕ್ಕಾಗಿ ಜಮೀನಿಗೆ ಹೋಗುತ್ತಿದ್ದರು. ಈ ವೇಳೆ ಗದ್ದೆಯ ಬಳಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟ್ರ್ಯಾಕ್ಟರ್ ಅಡಿ ಸಿಲುಕಿದ ಶಿವಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಾಸುದೇವ ಹೈಭತ್ತಿ ಹಾಗೂ ಮಲ್ಲಿಕಾರ್ಜುನ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular