BIG NEWS: ಧಾರವಾಡ ವಿವಿ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷ: ರಸ್ತೆಯಲ್ಲಿ ಓಡಾಡದಂತೆ ವಿದ್ಯಾರ್ಥಿಗಳಿಗೆ, ಸಿಬ್ಬಂದಿಗಳಿಗೆ ಇಂದು ನಿರ್ಬಂಧ

ಧಾರವಾಡ: ಧಾರವಾಡ ಕರ್ನಾಟಕ ವಿಶ್ವ ವಿದ್ಯಾಲಯದ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ವಿದ್ಯಾರ್ಥಿಗಳು, ವಿವಿ ಸಿಬ್ಬಂದಿಗಳು ಆತಂಕದಲ್ಲಿ ಕಾಲಕಳೆಯುವ ಸ್ಥಿತಿ ನಿರ್ಮಾಣವಾಗಿದೆ.

ವಿಶ್ವವಿದ್ಯಾಲಯದ ಗ್ರಂಥಾಲಯ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಈ ರಸ್ತೆಯಲ್ಲಿ ಇಂದು ಇಡೀ ದಿನ ವಿದ್ಯಾರ್ಥಿಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.

ಮಲಪ್ರಭಾ ವಸತಿ ನಿಲಯಕ್ಕೆ ಹೋಗುವ ಎಲ್ಲಾ ಸಿಬ್ಬಂದಿ ಹಾಗೂ ಹಾಸ್ಟೇಲ್ ವಿದ್ಯಾರ್ಥಿಗಳಿಗೂ ಇಂದು ಓಡಾಟ ನಡೆಸದಂತೆ ಸೂಚಿಸಲಾಗಿದೆ.

2 ವಾರಗಳ ಹಿಂದೆ ಕರ್ನಾಟಕ ವಿವಿ ಕ್ಯಾಂಪಸ್ ನಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಅರಣ್ಯ ಸಿಬ್ಬಂದಿ ಎಷ್ಟೇ ಪ್ರಯತ್ನ ಪಟ್ಟರೂ ಚಿರತೆ ಸೆರೆಹಿಡಿಯಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಚಿರತೆ ಕಾರ್ಯಾಚರಣೆಗೆ ನಿರ್ಧರಿಸಲಾಗಿದ್ದು, ಇಡೀ ದಿನ ಇಂದು ವಿವಿ ಕ್ಯಾಂಪಸ್ ನಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕ್ಯಾಂಪಸ್ ನಲ್ಲಿ 4 ಬೋನುಗಳನ್ನಿಟ್ಟು ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಮುಂದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read