HomeKarnatakaSHOCKING: ಕಾರಿನಲ್ಲಿ ಮಾಜಿ ಶಾಸಕನ ಪುತ್ರನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ

SHOCKING: ಕಾರಿನಲ್ಲಿ ಮಾಜಿ ಶಾಸಕನ ಪುತ್ರನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ

ಧಾರವಾಡ: ದಟ್ಟಾರಣ್ಯದ ಪ್ರದೇಶದಲ್ಲಿ ಕಾರಿನಲ್ಲಿ ಮಾಜಿ ಶಾಸಕರೊಬ್ಬರ ಪುತ್ರನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಧಾರವಾಡ ಜಿಲ್ಲೆಯ ರಾಮಾಪುರ ಬಳಿ ನಡೆದಿದೆ.

ರಾಮಾಪುರ ಬಳಿಯ ದಟ್ಟ ಕಾಡಿನಲ್ಲಿ ನಿಂತಿದ್ದ ಕಾರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಎಂದು ಗುರುತಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಉಡಕೇರಿ ಗ್ರಾಮದ ನಿವಾಸಿಯಾಗಿರುವ ರಾಜು ಬೋಳಶೆಟ್ಟಿ ಅವರ ಮೃತದೇಹ ಅವರದ್ದೇ ಕಾರನಲ್ಲಿ ಸಂಪೂರ್ಣವಾಗಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾರು ಕೂಡ ಸುಟ್ಟು ಹೋಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular