ಧಾರವಾಡ: ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪನಗರ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಲೆ ಮಾಡಿದ 9 ಆರೋಪಿಗಳ ಪೈಕಿ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹಿಂದಿನ ಕೆಲ ವೈಷಮ್ಯಗಳು ಹಾಗೂ ರಿಯಲ್ ಎಸ್ಟೇಟ್ ವ್ಯವಹಾರವೇ ಕೊಲೆಗೆ ಕಾರಣ ಎನ್ನಲಾಗಿದೆ.
ಕೊಲೆ ಮಾಡಲು ಮಹಮ್ಮದ್ ಶಾ ನೊಂದಿಗೆ ಬಂದಿದ್ದ ಸದ್ದಾಂ, ಗೌಸ್, ಪರ್ವೇಜ್ ಸಮೀರ್ ನನ್ನು ಬಂಧಿಸಲಾಗಿದೆ. ಇನ್ನು ಮತ್ತೊಬ್ಬ ಆರೋಪಿ ಕೈಫ್ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಮಹಮ್ಮದ್ ಶಾ ಹಾಗೂ ಫೈರೋಜ್ ಪಠಾಣ್ ನಡುವಿನ ವೈಯಕ್ತಿಕ ದ್ವೇಷವೇ ಕೊಲೆಗೆ ಕಾರಣ. ಅದರೊಂದಿಗೆ ರಿಯಲ್ ಎಸ್ಟೇಟ್ ವ್ಯವಹಾರವೂ ಈ ಕೊಲೆಗೆ ಕಾರಣವಾಗಿದೆ ಎನ್ನಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಮಹಮ್ಮದ್ ಶಾ ಹಿಂದಿನ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡು ಈ ಕೊಲೆ ಮಾಡಿದ್ಧಾನೆ.
ಈತನೊಂದಿಗೆ ಕೆಲ ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ಭೀಕರವಾಗಿ ಹತ್ಯೆತಾಗಿದ್ದ ರೌಡಿ ಶೀಟರ್ ಫ್ರೂಟ್ ಇರ್ಫಾನ್ ಮಗ ಅರ್ಬಾಜ್ ಹಂಚಿನಮನಿ ಮತ್ತು ರೌಡಿ ಶೀಟರ್ ಮುಕ್ತುಂ ಸೊಗಲದ್ ಕೂಡ ಕೈ ಜೋಡಿಸಿದ್ದು, ಇದೀಗ ಎಲ್ಲರನ್ನೂ ವಿಚಾರಣೆಗೊಳಪಡಿಸಲಾಗಿದೆ.
ಕೆಲ ತಿಂಗಳ ಹಿಂದೆ ಫೈರೋಜ್ ಹಾಗೂ ಮಹಮ್ಮದ್ ಶಾ ನಡುವೆ ವೈಯಕ್ತಿಕ ವಿಚಾರವಾಗಿ ಜಗಳ ನಡೆದಿತ್ತು. ಆಗ ಫೈರೋಜ್ ಮಹಮ್ಮದ್ ಶಾ ಮನೆಗೆ ಕೆಲವರೊಂದಿಗೆ ಹೋಗಿ ಗಲಾಟೆ ಮಾಡಿ ಬಂದಿದ್ದ. ಅಲ್ಲದೇ ಅದನ್ನು ಪದೇ ಪದೇ ಬೇರೆಯವರ ಬಳಿ ಹೇಳಿ ತಮಾಷೆ ಮಾಡುತ್ತಿದ್ದ. ಇದು ಮಹಮ್ಮದ್ ಶಾನ ಕೋಪಕ್ಕೆ ಕಾರಣವಾಗಿತ್ತು. ಇದೇ ವೇಳೆ ರೌಡಿ ಶೀಟರ್ ಮುಕ್ತುಂ ಸೊಗಲದ್ ಹಾಗೂ ಫೈರೋಜ್ ನಡುವೆ ರಿಯಲ್ ಎಸ್ಟೇಟ್ ವಿಚಾರವಾಗಿ ಮನಸ್ತಾಪವಾಗಿತ್ತು. ಹೀಗೆ ಆತನಿಂದ ದೂರವಾದವರೆಲ್ಲ ಒಂದಾಗಿ ಈ ಕೊಲೆಯ ಸಂಚನ್ನು ರೂಪಿಸಿದ್ದರು.
ಮೊದಲೇ ಪ್ಲಾನ್ ಮಾಡಿಕೊಂಡಿದ್ದಂತೆ ಫೈರೋಜ್ ನ ಮನೆಗೆ ನುಗ್ಗಿ ಚಾಕುವಿನಿಂದ ಇರುದು ಬರ್ಬರವಾಗಿ ಆತನನ್ನು ಹತ್ಯೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು.

